ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕ್ಯಾಂಪಸ್‍ನಲ್ಲಿರುವ ವಿವೇಕಾನಂದ ಪ್ರತಿಮೆಗೆ ಪ್ರಭಾರಿ ಉಪಕುಲಪತಿ ಪೆÇ್ರ. ಕೆ.ಸಿ. ಬೈಜು, ರಿಜಿಸ್ಟ್ರಾರ್ ಡಾ. ಎಂ. ಮುರಳೀಧರನ್ ನಂಬಿಯಾರ್, ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪೆÇ್ರ. ಮುತ್ತುಕುಮಾರ್ ಮುತ್ತುಚಾಮಿ, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಮೊದಲಾದವರು ಪುಷ್ಪನಮನ ಸಲ್ಲಿಸಿದರು. ನಂತರ ಸೈಕಲ್ ರ್ಯಾಲಿಯನ್ನು ಪ್ರಭಾರಿ ಉಪಕುಲಪತಿ ಪೆÇ್ರ. ಕೆ.ಸಿ. ಬೈಜು ಹಸಿರುನಿಶಾನಿ ತೋರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದ ಅವರ ಜೀವನ ಮತ್ತು ಚಿಂತನೆಗಳು ಯುವಕರಿಗೆ ಮಾದರಿ ಮತ್ತು ಸ್ಫೂರ್ತಿಯಾಗಿದೆ. ಶೋಷಣೆ ಮತ್ತು ತಾರತಮ್ಯ ಮುಕ್ತ ಸಮಾಜಕ್ಕಾಗಿ ಅವರ ಸಂದೇಶಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.
ಯುವ ದಿನಾಚರಣೆವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಮಾಧವ್ ಕುಮಾರ್ ಝಾ, ಕೆ. ಮುಹಮ್ಮದ್ ಶಾಹಿದ್ (ಅಂತರರಾಷ್ಟ್ರೀಯ ಸಂಬಂಧಗಳು ಮತ್ತು ರಾಜಕೀಯ), ಎಸ್. ಶ್ರುತಿ, ಎಂ.ಜಿ. ಗೋಪಿಕಾ (ರಸಾಯನಶಾಸ್ತ್ರ), ನೇಹಾ ಭಾರ್ಗವ ಮತ್ತು ನೀರಜ್ (ಯೋಗ ಅಧ್ಯಯನ) ತಂಡಗಳು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದುಕೊಂಡವು. ವಿವೇಕಾನಂದ ವೃತ್ತದಲ್ಲಿ ವಿದ್ಯಾರ್ಥಿಗಳು ದೀಪ ಬೆಳಗಿಸಿದರು. ಡಾ. ಎಸ್. ಅಂಬಳಗಿ, ಡಾ. ರೆನ್ಹಾರ್ಟ್ ಫಿಲಿಪ್, ಡಾ. ಚಂದ್ರಶೇಖರನ್ ಮೇಲತ್ ನೇತೃತ್ವ ನೀಡಿದರು.