ನವದೆಹಲಿ: ವಿಮಾನ ಟೇಕಾಫ್ ವಿಳಂಬದ ಬಗ್ಗೆ ಮಾಹಿತಿ ನೀಡುತ್ತಿದ್ದ ಇಂಡಿಗೋ ವಿಮಾನದ ಪೈಲಟ್ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ ಘಟನೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ನವದೆಹಲಿ: ವಿಮಾನ ಟೇಕಾಫ್ ವಿಳಂಬದ ಬಗ್ಗೆ ಮಾಹಿತಿ ನೀಡುತ್ತಿದ್ದ ಇಂಡಿಗೋ ವಿಮಾನದ ಪೈಲಟ್ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ ಘಟನೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ದೂರು ಬಂದಿದ್ದು, ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಡಿ.ಸಿ.ಪಿ ತಿಳಿಸಿದ್ದಾರೆ.
ಪೈಲಟ್ ಮೇಲೆ ಹಲ್ಲೆ ಮಾಡಿದ ಬಳಿಕ ಇತರ ವಿಮಾನ ಸಿಬ್ಬಂದಿಗಳು ಹಾಗೂ ಪ್ರಯಾಣಿಕರು ಕಿರುಚುವ ಶಬ್ದ ವಿಡಿಯೊದಲ್ಲಿ ದಾಖಲಾಗಿದೆ.