ಪಟ್ನಾ: ಜೆಡಿ(ಯು) ನಾಯಕ ನಿತೀಶ್ ಕುಮಾರ್ 9ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.
ಪಟ್ನಾ: ಜೆಡಿ(ಯು) ನಾಯಕ ನಿತೀಶ್ ಕುಮಾರ್ 9ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಬಿಜೆಪಿಯ ಸಾಮ್ರಾಟ್ ಚೌಧರಿ ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಬೆಳಿಗ್ಗೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಯು ಮತ್ತು ಎನ್‌ಡಿಎ ಬಣದ ಇತರೆ ಪಕ್ಷಗಳ ಜೊತೆ ಸೇರಿ ಸರ್ಕಾರ ರಚಿಸುವ ನಿರ್ಣಯ ಕೈಗೊಳ್ಳಲಾಗಿತ್ತು.
ಇದಕ್ಕೂ ಮುನ್ನ, ಜೆಡಿಯು ಶಾಸಕರ ಸಭೆ ನಡೆಸಿದ ನಿತೀಶ್ ಕುಮಾರ್ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದರು.
ಮಹಾಘಟಬಂಧನ ಮತ್ತು ಇಂಡಿಯಾ ಬಣದಲ್ಲಿ ಎಲ್ಲವೂ ಸರಿಯಿಲ್ಲದ ಕಾರಣ ಈ ಪರಿಸ್ಥಿತಿ ಬಂದಿದೆ. ಎಲ್ಲರಿಂದಲೂ ಅಭಿಪ್ರಾಯಗಳನ್ನು ಪಡೆದಿದ್ದೇನೆ. ಆ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ್ದೇನೆ. ಸರ್ಕಾರ ವಿಸರ್ಜನೆಯಾಗಿದೆ ಎಂದು ರಾಜಭವನದ ಹೊರಗೆ ನಿತೀಶ್ ಕುಮಾರ್ ಸುದ್ದಿಗಾರರರಿಗೆ ತಿಳಿಸಿದ್ದರು.