ಕಾಸರಗೋಡು: ಜಿಲ್ಲೆಯ ಎಂಡೋಸಲ್ಫಾನ್ ದುಷ್ಪರಿನಾಮಪೀಡಿತರ ಪುನರ್ವಸತಿಗಾಗಿ ನಿರ್ಮಾಣಗೊಳ್ಳುತ್ತಿರುವ ಪುನರ್ವಸತಿ ಗ್ರಾಮದ ಕಾಮಗಾರಿ ಪೂರ್ತಿಗೊಳಿಸುವಲ್ಲಿ Àಉಂಟಾಗುತ್ತಿರುವ ವಿಳಂಬದಿಂದ ಸಂತ್ರಸ್ತರು ಸೂಕ್ತ ಪರಿಪಾಲನೆಯಿಂದ ವಂಚಿತರಾಗುತ್ತಿದ್ದಾರೆ. ಎಂಡೋಸಲ್ಫಾನ್ ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ಜನೆತೆ ಸಂತ್ರಸ್ತರ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ಆರಂಭಿಸಲಾಗಿದ್ದರೂ, ನಾನಾ ಕಾರಣಗಳಿಂದ ಕಾಮಗಾರಿ ಪೂರ್ತಿಗೊಳಿಸಲಾಗುತ್ತಿಲ್ಲ.
ಮುಳಿಯಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಮಾಜಿಕ ನ್ಯಾಯ ಇಲಾಖೆ ಅಧೀನದಲ್ಲಿ ನಿರ್ಮಿಸಲಾಗುತ್ತಿರುವ ಎಂಡೋಸಲ್ಫಾನ್ ಪುನರ್ವಸತಿ ಗ್ರಾಮದ ಮೊದಲ ಹಂತದ ಕಾಮಗಾರಿ ಜನವರಿ 31ರೊಳಗೆ ಪೂರ್ಣಗೊಳಿಸಲು ಯೋಜನೆಯಿರಿಸಿಕೊಂಡಿದ್ದರೂ, ಕಾಮಗಾರಿ ಇನ್ನೂ ನಿಧಾನಗತಿಯಲ್ಲಿ ಸಾಗುತ್ತಿದೆ.
ಪ್ರಗತಿಪರಿಶೀಲನಾ ಸಭೆ:
ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಎಂಡೋಸಲ್ಫಾನ್ ಪುನರ್ವಸತಿ ಗ್ರಾಮ ನಿರ್ಮಾಣದ ಪ್ರಗತಿ ಪರಿಶೀಲನಾ ಸಭೆ ಸಾಮಾಜಿಕ ನ್ಯಾಯ ಇಲಾಖೆ ನಿರ್ದೇಶಕ ಎಚ್.ದಿನೇಶನ್ ನೇತ್ರತ್ವದಲ್ಲಿ ಆಯೋಜಿಸಲಾಗಿತ್ತು. ಜನವರಿ ಅಂತ್ಯದೊಳಗಾಗಿ ಕಾಮಗಾರಿ ಪಊರ್ತಿಗೊಳಿಸಿ ಫೆಬ್ರುವರಿ ಎರಡನೇ ವಾರದೊಳಗೆ ಚಿಕಿತ್ಸಾ ವಿಧಾನಗಳಿಗೆ ಅಗತ್ಯ ಸೌಕರ್ಯ ಹಾಗೂ ಪೀಠೋಪಕರಣಗಳನ್ನು ಸಿದ್ಧಪಡಿಸಿ ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಳಿಸಿ ಉದ್ಘಾಟನೆಗೆ ಸಿದ್ಧಗೊಳಿಸಲು ಅಧಿಕಾರಿಗಳಿಗೆ ಸೂಚನೆ ನಿಡಲಾಗಿದೆ. ಹೆಚ್ಚಿನ ಚಿಕಿತ್ಸಾ ಸೌಲಭ್ಯ ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ತಿಳಿಸಿದ್ದಾರೆ. ಪೀಠೋಪಕರಣಗಳು ಸೇೀರಿದಂತೆ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ಉರಾಲುಂಗಲ್ ಲೇಬರ್ ಕಾಂಟ್ರಾಕ್ಟ್ ಸೊಸೈಟಿ ಲಿಮಿಟೆಡ್‍ಗೆ ಜವಾಬ್ದಾರಿ ವಹಿಸಿಕೊಡಲಾಗಿದೆ. ಉದ್ಘಾಟನೆಯ ನಂತರ ಎಂಡೋಸಲ್ಫಾನ್ ಸಂತ್ರಸ್ತರಿಗೆ ಪುನರ್ವಸತಿ ಗ್ರಾಮದಲ್ಲಿ ಚಿಕಿತ್ಸಾ ಸೌಲಭ್ಯಗಳು ವ್ಯವಸ್ಥಿತವಾಗಿ ಲಭ್ಯವಾಗುವಂತೆ ಮಾಡಲು ಯೋಜನೆಯಿರಿಸಿಕೊಳ್ಳಲಾಗಿದೆ. ಸಾಮಾಜಿಕ ನ್ಯಾಯ ಇಲಾಖೆಯ ಹೆಚ್ಚುವರಿ ನಿರ್ದೇಶಕ ಎಸ್. ಜಲಜಾ, ನಿಪ್‍ಮಾರ್ ಕಾರ್ಯನಿರ್ವಾಹಕ ನಿರ್ದೇಶಕ ಸಿ. ಚಂದ್ರಬಾಬು, ಜಿಲ್ಲಾ ಸಾಮಾಜಿಕ ನ್ಯಾಯಅಧಿಕಾರಿ ಆರ್ಯ.ಪಿ ರಾಜ್ ಸಹ ಮಾತನಾಡಿದರು. ಕೇರಳ ಸಾಮಾಜಿಕ ಭದ್ರತಾ ಆಯೋಗದ ಪ್ರತಿನಿಧಿಗಳು, ಯುಎಲ್‍ಸಿಸಿಎಲ್ ಪ್ರತಿನಿಧಿಗಳು ಮೊದಲಾದವರು ಭಾಗವಹಿಸಿದ್ದರು.
ಪುನರ್ವಸತಿ ಗ್ರಾಮಕ್ಕೆ ಭೇಟಿ:
ಮುಳಿಯಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಎಂಡೋಸಲ್ಫಾನ್ ಪುನರ್ವಸತಿ ಗ್ರಾಮದಲ್ಲಿ ನಡೆಯುತ್ತಿರುವ ಅಭಿವೃದ್ಧಿಕಾರ್ಯಗಳ ಅವಲೋಕನೆಗಾಗಿ ಸಾಮಾಜಿಕ ನ್ಯಾಯ ಇಲಾಖೆ ನಿರ್ದೇಶಕ ಎಚ್.ದಿನೇಶನ್ ನೇತೃತ್ವದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿನೀಡಿ ಪರಾಮರ್ಶೆ ನಡೆಸಿತು. ಸಾಮಾಜಿಕ ನ್ಯಾಯ ಹೆಚ್ಚುವರಿ ನಿರ್ದೇಶಕಿ ಎಸ್.ಜಲಜಾ, ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಆರ್ಯ ಪಿ.ರಾಜ್, ಕೆಎಸ್‍ಎಸ್‍ಎಂ ಪ್ರತಿನಿಧಿಗಳು, ಎನ್‍ಐಪಿಎಂಎಆರ್ ಜತೆಗಿದ್ದರು.