ವಾರಾಣಸಿ: ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಹಿಂದೂ ದೇವರನ್ನು ಪೂಜಿಸುವ ಹಕ್ಕು ಅರ್ಚಕರ ಕುಟುಂಬಕ್ಕಿದೆ ಎಂದು ವಾರಾಣಸಿ ಜಿಲ್ಲಾ ನ್ಯಾಯಾಲಯ ಬುಧವಾರ ಆದೇಶ ನೀಡಿದೆ ಎಂದು ಹಿಂದೂ ಪರ ವಕೀಲ ಮದನ್ ಮೋಹನ್ ಯಾದವ್ ಹೇಳಿದ್ದಾರೆ.
ವಾರಾಣಸಿ: ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಹಿಂದೂ ದೇವರನ್ನು ಪೂಜಿಸುವ ಹಕ್ಕು ಅರ್ಚಕರ ಕುಟುಂಬಕ್ಕಿದೆ ಎಂದು ವಾರಾಣಸಿ ಜಿಲ್ಲಾ ನ್ಯಾಯಾಲಯ ಬುಧವಾರ ಆದೇಶ ನೀಡಿದೆ ಎಂದು ಹಿಂದೂ ಪರ ವಕೀಲ ಮದನ್ ಮೋಹನ್ ಯಾದವ್ ಹೇಳಿದ್ದಾರೆ.
ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎ.ಕೆ. ವಿಶ್ವೇಶ್ ಈ ಆದೇಶ ಹೊರಡಿಸಿದ್ದಾರೆ.
ಕಾಶಿ ವಿಶ್ವನಾಥ ಟ್ರಸ್ಟ್ ವತಿಯಿಂದ ಪೂಜೆ ನೆರವೇರಿಸಲು ಜಿಲ್ಲಾಡಳಿತ ವ್ಯವಸ್ಥೆ ಮಾಡಲಿದೆ ಎಂದು ಮೋಹನ್ ಯಾದವ್ ತಿಳಿಸಿದ್ದಾರೆ.
ಅರ್ಜಿಯ ಪ್ರಕಾರ, ಅರ್ಚಕ ಸೋಮನಾಥ ವ್ಯಾಸ್ ಅವರು 1993 ರವರೆಗೆ (ಅಧಿಕಾರಿಗಳು ನೆಲಮಾಳಿಗೆಯನ್ನು ಮುಚ್ಚುವವರೆಗೆ) ಅಲ್ಲಿ ಪೂಜೆ ಸಲ್ಲಿಸುತ್ತಿದ್ದರು. ಇದೀಗ ಎಎಸ್‌ಐ ವೈಜ್ಞಾನಿಕ ಸಮೀಕ್ಷೆಯ ವರದಿ ನೀಡಿದ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಅರ್ಚಕ ಸೋಮನಾಥ್ ವ್ಯಾಸ್ ಅವರ ಮೊಮ್ಮಗ ಶೈಲೇಂದ್ರ ಕುಮಾರ್ ಪಾಠಕ್ ನ್ಯಾಯಾಲಯವನ್ನು ಕೋರಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಿದೆ.