ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಎಯುಪಿ ಶಾಲಾ ವಾರ್ಷಿಕೋತ್ಸವ ಗುರುವಾರ ನಡೆಯಿತು. ಬೆಳಗ್ಗೆ ಶಾಲಾ ಸಂಚಾಲಕಿ ರಾಜೇಶ್ವರಿ ಎಸ್ ರಾವ್ ಅವರು ಧ್ವಜಾರೋಹಣಗೈದು ಉದ್ಘಾಟಿಸಿದರು. ಸಂಜೆ 7ರ ವರೆಗೆ ದಿ.ರಾಮಕೃಷ್ಣ ರಾವ್ ವೇದಿಕೆಯಲ್ಲಿ ಮಕ್ಕಳ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.
ಅಪರಾಹ್ನ 2 ಕ್ಕೆ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾಸರಗೋಡಿನ ಎಲ್.ಬಿ.ಎಸ್. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಮೊಹಮ್ಮದ್ ಶೆಕೂರು.ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಸಂಚಾಲಕಿ ರಾಜೇಶ್ವರಿ ಎಸ್ ರಾವ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷÀ ಹಮೀದ್ ಮೈತಾಳ, ಮಾತೃ ಸಂಘದ ಅದ್ಯಕ್ಷೆ ಸ್ವಪ್ನಾ ಉಪಸ್ಥಿತರಿದ್ದರು. ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್ ಎಮ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿಯವರು ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಹಿರಿಯ ಅಧ್ಯಾಪಕಿ ವೇದಾವತಿ.ಸಿ ಅವರಿಗೆ ಗೌರಾವಾಭಿನಂದನೆ ನಡೆಯಿತು. ಶಾಲಾ ಅಧ್ಯಾಪಕ ಹರೀಶ್ ಸುಲಾಯ ಒಡ್ಡಂಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಅಧ್ಯಾಪಿಕೆ ರಾಧಾಮಣಿ ಟೀಚರ್ ವಂದಿಸಿದರು.