ಪೆರ್ಲ: ಅಯೋಧ್ಯೆಯಲ್ಲಿ ಜ. 22ರಂದು ನಡೆಯಲಿರುವ ಶ್ರೀರಾಮದೇವರ ಪ್ರಾಣಪ್ರತಿಷ್ಠಾ ಮಹೋತ್ಸವದ ಸಂದರ್ಭವನ್ನು ಅವಿಸ್ಮರಣೀಯಗೊಳಿಸುವ ನಿಟ್ಟಿನಲ್ಲಿ ಶ್ರೀರಾಮ ತಾರಕ ಹೋಮ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ ಜ 22ರಂದು ಬೆಳಗ್ಗೆ 10ರಿಂದ ಪೆರ್ಲ ಸನಿಹದ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನ ಸಭಾಂಗಣದಲ್ಲಿ ಜರುಗಲಿದೆ.
ಬೆಳಗ್ಗೆ10ಕ್ಕೆ ಶ್ರೀರಾಮ ತಾರಕ ಹೋಮ, ಸಾಮೂಹಿಕ ಶ್ರೀರಾಮ ತಾರಕ ಜಪ, ಧಾರ್ಮಿಕ ಸಭೆ, ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಪಾಲ್ಗೊಂಡಿದ್ದ ಕರಸೇವಕರಿಗೆ ಗೌರವಾರ್ಪಣೆ, ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮದೇವರ ಪ್ರಾಣಪ್ರತಿಷ್ಠಾ ಮಹೋತ್ಸವದ ನೇರ ಪ್ರಸಾರದ ವೀಕ್ಷಣೆ ನಡೆಯುವುದು. ಮಧ್ಯಾಹ್ನ 12ಕ್ಕೆ ಶ್ರಿರಾಮತಾರಕ ಹೋಮದ ಪೂರ್ಣಾಹುತಿ, ಮಹಾಪೂಜೆ ನಡೆಯುವುದು.