ನವದೆಹಲಿ: ರಾಜ್ಯದಲ್ಲಿ ಜಾತಿಗಣತಿ ನಡೆಸಲು ಮುಂದಾಗಿರುವ ತೆಲಂಗಾಣ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನ್ಯಾಯದ ಕಡೆಗೆ ಮೊದಲ ಹೆಜ್ಜೆ ಇಟ್ಟಿದ್ದಕ್ಕಾಗಿ ಅಭಿನಂದನೆಗಳು ಎಂದು ಹೇಳಿದ್ದಾರೆ.
ನವದೆಹಲಿ: ರಾಜ್ಯದಲ್ಲಿ ಜಾತಿಗಣತಿ ನಡೆಸಲು ಮುಂದಾಗಿರುವ ತೆಲಂಗಾಣ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನ್ಯಾಯದ ಕಡೆಗೆ ಮೊದಲ ಹೆಜ್ಜೆ ಇಟ್ಟಿದ್ದಕ್ಕಾಗಿ ಅಭಿನಂದನೆಗಳು ಎಂದು ಹೇಳಿದ್ದಾರೆ.
ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, 'ಜಾತಿಗಣತಿ ಎನ್ನುವುದು ನ್ಯಾಯದ ಕಡೆ ಇಡುವ ಮೊದಲ ಹೆಜ್ಜೆ.
ಸಮಾಜದ ಎಲ್ಲ ವರ್ಗಗಳ ಸಹಭಾಗಿತ್ವವನ್ನು ಖಾತರಿಪಡಿಸಿಕೊಳ್ಳುವ ಏಕೈಕ ಮಾರ್ಗ ಜಾತಿಗಣತಿ ಮಾಡುವುದಾಗಿದೆ. ಜಾತಿಗಣತಿ ನ್ಯಾಯದ ಕಡೆ ಇಡುವ ಮೊದಲ ಹೆಜ್ಜೆಯಾಗಿದೆ. ಯಾವುದೇ ಸಮಾಜದಲ್ಲಿನ ಸಾಮಾಜಿಕ, ಆರ್ಥಿಕ ಆರೋಗ್ಯವನ್ನು ಅರಿಯದೆ ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ರೂಪಿಸಲಾಗದು. ದೇಶದ ಅಭಿವೃದ್ಧಿಯ ದೃಷ್ಟಿಯಿಂದಲೂ ಎಲ್ಲ ವರ್ಗಗಳ ಪಾಲ್ಗೊಳ್ಳುವಿಕೆಯು ಮುಖ್ಯವಾಗಿದ್ದು, ಜಾತಿಗಣತಿಯಿಂದ ಇದು ಸಾಧ್ಯವಾಗಲಿದೆ ಎಂದು ಅವರು 'ಎಕ್ಸ್' ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ತೆಲಂಗಾಣದಲ್ಲಿ ಜಾತಿಗಣತಿ ಮಾಡುವುದಾಗಿ ರೇವಂತ್ ರೆಡ್ಡಿ ಶನಿವಾರ ಘೋಷಿಸಿದ್ದರು.