ಕೋಲ್ಕತ್ತ: ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ (55) ಅವರು ಮಂಗಳವಾರ ನಿಧನರಾಗಿದ್ದಾರೆ.
ಕೋಲ್ಕತ್ತ: ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ (55) ಅವರು ಮಂಗಳವಾರ ನಿಧನರಾಗಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕೋಲ್ಕತ್ತದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮಿದುಳಿಗೆ ಪಾರ್ಶ್ವವಾಯು ಹೊಡೆದ ಕಾರಣ ಉಸ್ತಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಂಪುರ್-ಸಹಸ್ವಾನ್ ಘರಾನಾಗೆ ಸೇರಿದ ಖಾನ್, ಘರಾನ ಸಂಸ್ಥಾಪಕ ಇನಾಯತ್ ಹುಸೇನ್ ಖಾನ್ ಅವರ ಮೊಮ್ಮಗ.
ಉಸ್ತಾದ್ ರಶೀದ್ ಖಾನ್ ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.