ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ 48ದಿವಸಗಳ ಕಾಲ ನಡೆಯಲಿರುವ ಮಂಡಲ ಸಂಕೀರ್ತನೋತ್ಸವ ಜ. 14ರಿಂದ ಆರಂಭಗೊಳ್ಳಲಿದೆ. ಕೇರಳ ಕ್ಷೇತ್ರ ಸಂರಕ್ಷಣಾ ಸಮಿತಿ ಕಾಸರಗೋಡು ನೇತೃತ್ವದಲ್ಲಿ ಮಧೂರು ದೇವಸ್ಥಾನ ಜೀರ್ಣೋದ್ಧಾರ ನವೀಕರಣ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿರುವುದು.
14ರಂದು ಬೆಳಗ್ಗೆ 10ಕ್ಕೆ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉದ್ಘಾಟಿಸಿ, ಆಶೀರ್ವಚನ ನೀಡುವರು. ಮಾಣಿಲಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಘೋಷಾಯಾತ್ರೆ ಉದ್ಘಾಟಿಸುವರು. ಚಿನ್ಮಯಾ ಮಿಷನ್ ಮುಖ್ಯಸ್ಥ ಸ್ವಾಮಿ ವಿವಿಕ್ತಾನಂದ ಸರಸ್ವತೀ ಆಶೀರ್ವಚನ ನೀಡುವರು. ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯು.ಟಿ ಆಳ್ವ ಅಧ್ಯಕ್ಷತೆ ವಹಿಸುವರು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣುಆಸ್ರ, ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ಬ್ರಹ್ಮಶ್ರೀ ವಿಷ್ಣುಪ್ರಕಾಶ್ ಪಟ್ಟೇರಿ ಕಾವುಮಠ, ಮಧೂರು ದೇವಸ್ಥಾನದ ಮುಖ್ಯ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ, ದೇವಸ್ಥಾನದ ಪವಿತ್ರಪಾಣಿ ರತನ್‍ಕುಮಾರ್ ಕಾಮಡ ದಿವ್ಯ ಉಪಸ್ಥಿತರಿರುವರು.
ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕುಳೂರು ಕನ್ಯಾನ ಸದಾಶಿವ ಶೆಟ್ಟಿ, ಉದ್ಯಮಿ, ಮುಂಡಪ್ಪಲ ಸ್ರಿ ರಾಜರಾಜೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿ, ಮಧೂರು ದೇವಸ್ಥಾನ ನವೀಕರಣ ಸಮಿತಿ ಉಪಾಧ್ಯಕ್ಷ ಡಾ. ಬಿ.ಎಸ್. ರಾವ್, ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ಕಾರ್ಯದರ್ಶಿ ಮಂಜುನಾಥ ಕಾಮತ್, ಮಧೂರು ಗ್ರಾಪಂ ಅಧ್ಯಕ್ಷ ಕೆ. ಗೋಪಾಲಕೃಷ್ಣ, ಉಪಾಧ್ಯಕ್ಷೆ ಸ್ಮಿಜಾ ವಿನೋದ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಟಿ. ಮುಖ್ಯ ಅತಿಥಿಯಾಗಿ ಭಾಗವಹಿಸುವರು.