ಲಖನೌ: ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೊಳ್ಳಲಿರುವ ಬಾಲರಾಮನ ವಿಗ್ರಹದ ಚಿತ್ರ ಬಹಿರಂಗಗೊಂಡು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ಗುರುವಾರ ಬಹಿರಂಗಗೊಂಡಿದ್ದ ಚಿತ್ರದಲ್ಲಿ ವಿಗ್ರಹದ ಕಣ್ಣುಗಳಿಗೆ ಹಳದಿ ಬಟ್ಟೆ ಕಟ್ಟಲಾಗಿತ್ತು.
'ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ವಿಗ್ರಹದ ಕಣ್ಣುಗಳನ್ನು ಯಾರಿಗೂ ತೋರಿಸುವಂತಿಲ್ಲ' ಎಂದು ಅವರು ಶನಿವಾರ ತಿಳಿಸಿದರು. 'ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು ಹೇಗೆ? ಅದನ್ನು ಯಾರು ಸೋರಿಕೆ ಮಾಡಿದ್ದು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು' ಎಂದರು.