ರಾಮೇಶ್ವರಂ: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಧನುಷ್ಕೋಡಿಯಲ್ಲಿರುವ ಕೋದಂಡರಾಮ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ರಾಮೇಶ್ವರಂ: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಧನುಷ್ಕೋಡಿಯಲ್ಲಿರುವ ಕೋದಂಡರಾಮ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ತಮಿಳುನಾಡಿಗೆ ಪ್ರಧಾನಿ ಮೋದಿ ಅವರು ಮೂರು ದಿನಗಳ ಪ್ರವಾಸ ಕೈಗೊಂಡಿದ್ದರು. ಚೆನ್ನೈನಲ್ಲಿ ಅವರು ಖೇಲೋ ಇಂಡಿಯಾ ಗೇಮ್ಸ್ ಉದ್ಘಾಟನೆ ಮಾಡಿದ್ದರು. ಇದೇ ವೇಳೆ ಅವರು ತಮಿಳುನಾಡಿನ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದರು.
ನಾಳೆ ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಅವರು ರಾಮಾಯಣ ಸಂಪರ್ಕ ಹೊಂದಿರುವ ತಮಿಳುನಾಡು ದೇವಾಲಯಗಳಿಗೆ ಭೇಟಿ ನೀಡಿರುವುದು ವಿಶೇಷವಾಗಿದೆ.