HEALTH TIPS

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್​​ಗೆ 'ಝೆಡ್' ಶ್ರೇಣಿ ಭದ್ರತೆ

              ವದೆಹಲಿ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಝಡ್- ಪ್ಲಸ್ ಶ್ರೇಣಿಯ ಭದ್ರತಾ ವ್ಯವಸ್ಥೆ ಒದಗಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಕೇರಳ ರಾಜಭವನ ತಿಳಿಸಿದೆ.

                 ಗುಪ್ತಚರ ಮೂಲಗಳ ವರದಿ ಬಂದ ಬಳಿಕ ಆರಿಫ್ ಮೊಹಮ್ಮದ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲು ನಿರ್ಧರಿಸಿರುವ ಸಚಿವಾಲಯ, ಅವರಿಗೆ 'ಝೆಡ್' ಶ್ರೇಣಿಯ ಭದ್ರತೆಯನ್ನು ಒದಗಿಸಿದೆ.


                   ಇದುವರೆಗೆ ರಾಜ್ಯ ವರ್ಗದ ಭದ್ರತೆಯನ್ನು ಪಡೆಯುತ್ತಿದ್ದ ಕೇರಳ ರಾಜ್ಯಪಾಲರ ಭದ್ರತೆಯನ್ನು ಇನ್ನುಮುಂದೆ ಸಿಆರ್​ಸಿಎಫ್​ ನೋಡಕೊಳ್ಳಲಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

            ಕೊಟ್ಟಾರಕ್ಕರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ರಾಜ್ಯಪಾಲ ಆರಿಫ್ ಅವರಿಗೆ ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ 'ಸ್ಟೊಡೆಂಟ್ ಫೆಡೆರೇಷನ್ ಆಫ್‌ ಇಂಡಿಯಾ'ದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಅಗೌರವ ತೋರಿಸಿದ್ದರು.

               ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿ ಆರಿಫ್ ಅವರು ಕಾರಿನಿಂದ ಇಳಿದು ರಸ್ತೆಯ ಬದಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರು. ಈ ನಡುವೆ ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು.

                   ಈ ಕುರಿತು ಮಾತನಾಡಿದ ರಾಜ್ಯಪಾಲರು, ಪ್ರತಿಭಟನಾಕಾರರಿಗೆ ಮುಖ್ಯಮಂತ್ರಿಗಳು ದಿನಕೂಲಿ ಪಾವತಿಸುತ್ತಾರೆ. ಸರ್ಕಾರದ ವೈಫಲ್ಯದ ಮರೆಮಾಚಲು ಮುಖ್ಯಮಂತ್ರಿಗಳು ಇಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂದು ರಾಜ್ಯಪಾಲರು ಸಿಎಂ ವಿರುದ್ಧ ನೇರವಾಗಿ ವಾಗ್ದಾಳಿ ಮಾಡಿದರು.

ಹಿಂದೂ ಬಲಪಂಥೀಯ ಬೆಂಬಲಿಗರನ್ನು ತಮ್ಮ ಸೆನೆಟ್‌ಗಳಿಗೆ ನೇಮಿಸುವ ಮೂಲಕ ರಾಜ್ಯಪಾಲರು ವಿಶ್ವವಿದ್ಯಾಲಯಗಳನ್ನು ಕೇಸರಿಮಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಪಿಐ(ಎಂ) ಆರೋಪಿಸಿದೆ. ಜತೆಗೆ ಸೆಪ್ಟೆಂಬರ್‌ನಲ್ಲಿ ವಿಧಾನಸಭೆ ಅಂಗೀಕರಿಸಿದ ಕೇರಳ ಸರ್ಕಾರದ ಭೂ ಹಂಚಿಕೆ (ತಿದ್ದುಪಡಿ) ಮಸೂದೆಗೆ ಅಂಗೀಕಾರ ನೀಡದೆ ‌ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries