ಕಾಸರಗೊಡು: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠಾ ದಿನವನ್ನು ಜಿಲ್ಲೆಯ ಜನತೆ ಭಕ್ತಿ, ಸಂಭ್ರಮದಿಂದ ಆಚರಿಸಿಕೊಂಡರು. ಶ್ರೀರಾಮ ಪ್ರಾಣಪ್ರತಿಷ್ಟೆ ಅಂಗವಾಗಿ ಜಿಲ್ಲೆಯ ನಾನಾ ದೇಗುಲ, ಭಜನಾಮಂದಿರ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೇವಸ್ಥಾನ, ಭಜನಾ ಮಂದಿರಗಳಲ್ಲಿ ಬೆಳಗಿನಿಂದಲೇ ಭಜನೆ, ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಕಾಸರಗೋಡು ನಗರದ ಹೊಸಬಸ್‍ನಿಲ್ದಾಣ ಟ್ಯಾಕ್ಸಿ ಚಾಲಕರ ಸಂಘದ ಸ್ದಸ್ಯರು ಶ್ರೀರಾಮ ದೇವರ ಪ್ರಾಣಪ್ರತಿಷ್ಠಾ ದಿನವನ್ನು ವಿಶೇಷವಾಗಿ ಆಚರಿಸಿಕೊಂಡರು. ಸಂಘದ ವತಿಯಿಂದ ಸಾರ್ವಜನಿಕರಿಗೆ ಸಿಹಿತಿನಿಸು, ಪಾನೀಯ ವಿತರಿಸಲಾಯಿತು. ನಗರದ ವಿವಿಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೂ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಜನಾ ಸಂಕೀರ್ತನೆ, ಕುಣಿತ ಭಜನೆ, ಧಾರ್ಮಿಕ ಉಪನ್ಯಾಸ, ಅಯೋಧ್ಯಾಪ್ರತಿಷ್ಠಾಪನಾ ಕಾರ್ಯಕ್ರಮದ ನೇರ ಪ್ರಸಾರವನ್ನು ಬೃಹತ್ ಪರದೆಗಳಲ್ಲಿ ಬಿತ್ತರಿಸಲಾಯಿತು.
ಚಿತ್ರ: ಕಾಸರಗೋಡು ನಗರ ಹೊಸ ಬಸ್ ನಿಲ್ದಾಣ ವಠಾರದಲ್ಲಿ ಟ್ಯಾಕ್ಸಿ ಚಾಲಕರು ಹಾಗೂ ಸಥಳಿಯರು ಸಿಹಿತಿನಿಸು, ಪಾನೀಯ ವಿತರಿಸಿದರು.