ರಾಮೇಶ್ವರಂ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ 'ಅಗ್ನಿ ತೀರ್ಥ' ಕಡಲ ತೀರದಲ್ಲಿ ಪವಿತ್ರ ಸ್ನಾನ ಮಾಡಿದರು. ಬಳಿಕ ಶ್ರೀ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ರಾಮೇಶ್ವರಂ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ 'ಅಗ್ನಿ ತೀರ್ಥ' ಕಡಲ ತೀರದಲ್ಲಿ ಪವಿತ್ರ ಸ್ನಾನ ಮಾಡಿದರು. ಬಳಿಕ ಶ್ರೀ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ರುದ್ರಾಕ್ಷಿ ಮಾಲೆ ಧರಿಸಿದ್ದ ಮೋದಿ, ತಮಿಳುನಾಡಿನ ಪುರಾತನ ಶಿವ ದೇವಾಲಯ ರಾಮನಾಥಸ್ವಾಮಿ ದೇಗುಲದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ದ್ವೀಪದಲ್ಲಿರುವ ಶಿವ ದೇವಾಲಯವು ರಾಮಾಯಣದೊಂದಿಗೆ ಸಂಪರ್ಕ ಹೊಂದಿದೆ. ಇಲ್ಲಿರುವ ಶಿವಲಿಂಗವನ್ನು ಶ್ರೀರಾಮನು ಸ್ಥಾಪಿಸಿದ್ದಾನೆ. ರಾಮ ಹಾಗೂ ಸೀತಾದೇವಿ ಇಲ್ಲಿ ಪ್ರಾರ್ಥಿಸಿದ್ದರು ಎಂಬ ನಂಬಿಕೆಯಿದೆ.
ತಿರುಚಿರಾಪಳ್ಳಿ ಜಿಲ್ಲೆಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ, ವಾಯುಪಡೆಯ ಹೆಲಿಕಾಪ್ಟರ್ ಮೂಲಕ ರಾಮನಾಥಪುರಂಗೆ ಆಗಮಿಸಿದ ಮೋದಿ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯರು ಅದ್ದೂರಿ ಸ್ವಾಗತ ಕೋರಿದರು.