ಕೊಚ್ಚಿ: ಕೇರಳ ಹೈಕೋರ್ಟ್ ಸಂಕೀರ್ಣವನ್ನು ಕಳಮಸ್ಸೆರಿಗೆ ಸ್ಥಳಾಂತರಿಸುವ ನಿರ್ಧಾರವನ್ನು ಕೇರಳ ಹೈಕೋರ್ಟ್ ವಕೀಲರ ಸಂಘ ಬೆಂಬಲಿಸುವುದಿಲ್ಲ ಎಂದು ತಿಳಿಸಿದೆ.
ನಿನ್ನೆ ನಡೆದ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಘದ ಜತೆ ಸಮಾಲೋಚನೆ ನಡೆಸದೆ ಅಧಿಕಾರಿಗಳ ಮಟ್ಟದಲ್ಲಿ ನಿರ್ಣಯ ಕೈಗೊಂಡಿದ್ದಾರೆ ಎಂದು ಟೀಕಿಸಲಾಯಿತು.
ಕಳಮಸ್ಸೆರಿಗೆ ವರ್ಗಾವಣೆಯಾಗುವ ಸಂದರ್ಭದಲ್ಲಿ ವಕೀಲರಿಗೆ ನೀಡಬೇಕಾದ ಸೌಲಭ್ಯಗಳ ಬಗ್ಗೆ ತಿಳಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಅವರು ಸಂಘಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ನಿನ್ನೆ ಮಹಾಸಭೆ ನಡೆಯಿತು. ಹೈಕೋರ್ಟ್ ಬಳಿ ಇರುವ ಗೃಹ ಮಂಡಳಿಯ ಜಾಗವನ್ನು ಸ್ವಾಧೀನ ಪಡಿಸಿಕೊಂಡು ನ್ಯಾಯಾಲಯದ ಅಭಿವೃದ್ಧಿ ಕಾಮಗಾರಿ ನಡೆಸಬೇಕು ಎಂಬುದು ವಕೀಲರ ಸಂಘದ ಆಗ್ರಹವಾಗಿದೆ.