ಜೆರುಸಲೇಂ: ಹಮಾಸ್ ಬಂಡುಕೋರರು ಒತ್ತೆಯಾಳಾಗಿ ಇರಿಸಿಕೊಂಡಿರುವವರ ಬಿಡುಗಡೆಗೆ ಆಗ್ರಹಿಸಿ ಅವರ ಸಂಬಂಧಿಕರು ಶನಿವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು.
ಜೆರುಸಲೇಂ: ಹಮಾಸ್ ಬಂಡುಕೋರರು ಒತ್ತೆಯಾಳಾಗಿ ಇರಿಸಿಕೊಂಡಿರುವವರ ಬಿಡುಗಡೆಗೆ ಆಗ್ರಹಿಸಿ ಅವರ ಸಂಬಂಧಿಕರು ಶನಿವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು.
'100ಕ್ಕೂ ಹೆಚ್ಚು ಜನರನ್ನು ಹಮಾಸ್ ಒತ್ತೆಯಾಳಾಗಿ ಇರಿಸಿಕೊಂಡಿದ್ದು, ಅವರ ಬಿಡುಗಡೆಗೆ ಇಸ್ರೇಲ್ ಸರ್ಕಾರ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ' ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.
'105 ದಿನಗಳಿಂದ ಗೋಗರೆಯುತ್ತಿದ್ದೇವೆ. ಈಗಲಾದರೂ ಸರ್ಕಾರ ಮುಂದಾಳತ್ವ ವಹಿಸಿ, ಒತ್ತೆಯಾಳುಗಳ ಬಿಡುಗಡೆಗೆ ದಿಟ್ಟ ಹೆಜ್ಜೆ ಇಡಬೇಕು' ಎಂದು ಸಂಬಂಧಿಕರ ಗುಂಪೊಂದು ಮನವಿ ಮಾಡಿತು.
ಹಮಾಸ್ ಬಂಡುಕೋರರು ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಠಾತ್ ದಾಳಿ ನಡೆಸಿದ್ದು, ಈ ವರೆಗೆ 1,200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು ಮತ್ತು 250ಕ್ಕೂ ಹೆಚ್ಚು ಜನರನ್ನು ಹಮಾಸ್ ಒತ್ತೆಯಾಳಾಗಿ ಇರಿಸಿಕೊಂಡಿದೆ. ಹೀಗಾಗಿ ಹಮಾಸ್ ವಿರುದ್ಧ ಇಸ್ರೇಲ್ ಸಮರ ಸಾರಿದೆ.