ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಕೋವಿಡ್ ವೈರಾಣುವಿನ ಹೊಸ ಉಪ ತಳಿ ಜೆಎನ್.1ನ ಸೋಂಕು 34 ಜನರಿಗೆ ತಗಲಿರುವುದು ದೃಢಪಟ್ಟಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ತಿಳಿಸಿದೆ.
ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಕೋವಿಡ್ ವೈರಾಣುವಿನ ಹೊಸ ಉಪ ತಳಿ ಜೆಎನ್.1ನ ಸೋಂಕು 34 ಜನರಿಗೆ ತಗಲಿರುವುದು ದೃಢಪಟ್ಟಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ತಿಳಿಸಿದೆ.
ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ 22 ಮಾದರಿಗಳಲ್ಲಿ ಜೆಎನ್.1ನ ಸೋಂಕು ದೃಢಪಟ್ಟಿದೆ.
ಕಳೆದ ತಿಂಗಳು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಎಲ್ಲ ರೋಗಿಗಳು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈಯಲ್ಲಿ 2023 ಡಿಸೆಂಬರ್ 1ರಿಂದ 2024 ಜನವರಿ 8ರವರೆಗೆ ನಡೆಸಿದ್ದ 8,262 ಮಾದರಿ ಪರೀಕ್ಷೆಗಳ ಪೈಕಿ 394 ಮಂದಿಯಲ್ಲಿ ಕೋವಿಡ್ ದೃಢಪಟ್ಟಿತ್ತು.