ಕಾಸರಗೋಡು: ಜಿಲ್ಲಾ ಪಂಚಾಯಿತಿ ಆಡಳಿತ ಸಮಿತಿ ಸಭೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿತು. ಜಿಪಂ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ 2024-25ನೇ ವಾರ್ಷಿಕ ಯೋಜನೆಯಲ್ಲಿ ಸೇಪ್ಡೆಗೊಳಿಸಬೇಕಾದ ಯೋಜನೆಯ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಾಯಿತು.
2024-25ನೇ ಸಾಲಿನ ಆಯವ್ಯಯ ಮಂಡನೆ ಫೆ.12ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಮಾಹಿತಿ ನೀಡಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ ಮುಂದಿನ ಆರ್ಥಿಕ ವರ್ಷದ ಕಾರ್ಮಿಕ ಆಯವ್ಯಯಕ್ಕೆ ಸಭೆ ಅನುಮೋದನೆ ನೀಡಿತು. ಪ್ರಸಕ್ತ ವರ್ಷ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಟೆಂಡರ್‍ಗಳನ್ನು ಮಂಜೂರು ಮಾಡಿದೆ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಸ್ ಪಾದೂರು, ಅಭಿವೃದ್ಧಿ ಕಾರ್ಯಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ಗೀತಾ ಕೃಷ್ಣನ್, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಎಸ್.ಎನ್.ಸರಿತಾ, ಕ್ಷೇಮಾಭಿವೃದ್ಧಿಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಮನು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿ.ಜೆ.ಸಜಿತ್, ಜೋಮೋನ್ ಜೋಸ್, ಗೋಲ್ಡನ್ ಅಬ್ದುಲ್ ರಹಮಾನ್, ನಾರಾಯಣ ನಾಯ್ಕ್, ಕೆ.ಕಮಲಾಕ್ಷಿ, ಜಾಸ್ಮಿನ್ ಕಬೀರ್, ಜಮೀಲಾ ಸಿದ್ದೀಕ್, ಕಾಸರಗೋಡು ಬ್ಲಾಕ್ ಪಂಚಾಯಿತಿ ಅಧ್ಯಕ್ಷೆ ಸಿ.ಎ.ಸೈಮಾ, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಪಿ.ಕೆ.ಸಜೀವ್, ಕಾರ್ಯನಿರ್ವಾಹಕ ಅಧಿಕಾರಿಗಳು, ನೌಕರರು ಭಾಗವಹಿಸಿದ್ದರು.