HEALTH TIPS

ಕೇಂದ್ರ ಬಜೆಟ್ 2024-25 ಪ್ರಸ್ತಾಪಗಳು 4 ಅಂಶಗಳ ಮೇಲೆ ನಿಂತಿವೆ: ವಿತ್ತ ಸಚಿವೆ ಸೀತಾರಾಮನ್

 ನವದೆಹಲಿ: ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್‌ಗೆ ಒತ್ತು ಕೊಡಲಾಗುತ್ತಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಇಂದು ಮಂಡನೆಯಾಗುತ್ತಿರುವ ಬಜೆಟ್'ನ 4 ಅಂಶಗಳನ್ನು ಹೆಸರಿಸಿದ್ದಾರೆ.

4 ಅಂಶಗಳು ಇಂತಿವೆ...

  • ಬಡವರು
  • ಮಹಿಳೆಯರು
  • ಯುವಕರು
  • ಅನ್ನದಾತರು

ಬಜೆಟ್​ನ ಮೊದಲ ಆಧಾರ ಸ್ತಂಭವಾಗಿರುವ ಬಡವರ ಅಭಿವೃದ್ಧಿಗೆ ಕೇಂದ್ರ ಹಣಕಾಸು ಸಚಿವರು ಹೆಚ್ಚಿನ ಒತ್ತು ನೀಡಿದ್ದು. ಬಹಳಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ.

ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಆರ್ಥಿಕವಾಗಿ ಬಲಿಷ್ಠವಾಗುತ್ತಿದೆ. ಕೊರೋನಾದಂತಹ ಶತಮಾನದ ಬಿಕ್ಕಟ್ಟಿನ ಮಧ್ಯೆಯೂ ಭಾರತವು ಸಕಲ ಕ್ಷೇತ್ರಗಳಲ್ಲಿ ಏಳಿಗೆ ಹೊಂದುತ್ತಿದೆ. ಉಜ್ವಲ ಭವಿಷ್ಯದತ್ತ ಭಾರತ ಹೆಜ್ಜೆ ಹಾಕುತ್ತಿದೆ. ಸುಭದ್ರ ಸರ್ಕಾರಕ್ಕೆ ಜನ ಬಹುಮತ ನೀಡಿದ್ದರಿಂದ ಇದೆಲ್ಲ ಸಾಕಾರವಾಗುತ್ತಿದೆ. ಸಬ್‌ ಕಾ ಸಾಥ್‌, ಸಬ್ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌ ಎಂಬ ಮಂತ್ರವು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

ಬಜೆಟ್ ಭಾಷಣದ ಆರಂಭದಲ್ಲಿ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಪ್ರಗತಿಯನ್ನು ನಿರ್ಮಲಾ ಸೀತಾರಾನ್ ಅವರು ವಿವರಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries