ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಮಂಡಿಸಿದ ಕೇಂದ್ರದ ಮಧ್ಯಂತರ ಬಜೆಟ್‌ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಮಂಡಿಸಿದ ಕೇಂದ್ರದ ಮಧ್ಯಂತರ ಬಜೆಟ್‌ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.
ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಮೋದಿ, 'ಮಧ್ಯಂತರ ಬಜೆಟ್ ವಿನೂತನ ಮತ್ತು ಎಲ್ಲವನ್ನೂ ಒಳಗೊಳ್ಳುವಂತಿದೆ.
'ಬಡವರು ಮತ್ತು ಮಧ್ಯಮ ವರ್ಗದ ಜನರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗಾಗಿ ಅವಕಾಶಗಳನ್ನು ಸೃಷ್ಟಿಸುವುದಕ್ಕೆ ಒತ್ತು ನೀಡಲಾಗಿದೆ. ಮನೆಗಳ ಛಾವಣಿಗಳ ಮೇಲೆ ಸೌರವಿದ್ಯುತ್ ಫಲಕಗಳನ್ನು ಅಳವಡಿಸುವ ಯೋಜನೆಯು ಕೋಟ್ಯಂತರ ಕುಟುಂಬಗಳು ಉಚಿತ ವಿದ್ಯುತ್ ಪಡೆಯಲು ನೆರವಾಗಲಿದೆ' ಎಂದು ಪ್ರತಿಪಾದಿಸಿದ್ದಾರೆ.
'ಬಜೆಟ್‌ನಲ್ಲಿ ನೀಡಲಾಗಿರುವ ಖಾತ್ರಿಗಳು 'ವಿಕಸಿತ ಭಾರತ-2047'ರ ಅಡಿಪಾಯವನ್ನು ಭದ್ರಪಡಿಸಿವೆ. ನಿರ್ಮಲಾ ಸೀತಾರಾಮನ್ ಮತ್ತು ಅವರ ತಂಡಕ್ಕೆ ಅಭಿನಂದನೆಗಳು. ಯುವ ಭಾರತದ ಆಕಾಂಕ್ಷೆಗಳು ಈ ಬಜೆಟ್ ಪ್ರತಿಫಲಿಸುತ್ತಿವೆ ' ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.