ದಾವಣಗೆರೆ: ಮುಂದಿನ ಬಾರಿ ನಡೆಯಲಿರುವ ರಾಜ್ಯ ಮಟ್ಟದ 39ನೇ ಪತ್ರಕರ್ತರ ಸಮ್ಮೇಳನವನ್ನು ತುಮಕೂರು ಜಿಲ್ಲೆಯಲ್ಲಿ ನಡೆಸಲು ನಿರ್ಣಯ ಕೈಗೊಳ್ಳಲಾಯಿತು.
ದಾವಣಗೆರೆ ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ 38ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಭಾನುವಾರ ನಡೆದ ಪ್ರತಿನಿಧಿಗಳ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ನಿರ್ಣಯ ಪ್ರಕಟಿಸಿದರು.
39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಸಲು ತುಮಕೂರು, ಶಿವಮೊಗ್ಗ, ರಾಯಚೂರು ಜಿಲ್ಲೆಗಳಿಂದ ಬೇಡಿಕೆ ಬಂದಿದ್ದು, ಎಲ್ಲರ ಒಪ್ಪಿಗೆಯ ತುಮಕೂರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ಸಮ್ಮೇಳನ ನಡೆಸಲು ₹ 50 ಲಕ್ಷ ನೀಡಬೇಕು ಎಂಬ ಹಕ್ಕೊತ್ತಾಯ ಮಂಡಿಸಿದರು.
ಸಭೆಯಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಭವಾನಿ ಸಿಂಗ್ ಟಾಕೂರ್, ಅಜ್ಜಮಾಡ ರಮೇಶ್ ಪುಟ್ಟಪ್ಪ, ಪುಂಡಲಿಕ ಪಿ.ಬಾಲಾಜಿ, ಮತ್ತಿಕೆರೆ ಜಯರಾಂ, ಸೋಮಶೇಖರ್ ಕೆರೆಗೋಡು, ನಿಂಗಪ್ಪ ಚೌವಡಿ, ವಸುದೇವ ಹೊಳ್ಳ ಇದ್ದರು.
ನಿರ್ಣಯಗಳುಎಲ್ಲಾ ಕಾರ್ಯನಿರತ ಪತ್ರಕರ್ತರಿಗೂ ಬಸ್ ಪಾಸ್ ನೀಡಬೇಕು.
ಪತ್ರಕರ್ತರಿಗೂ ಅರೋಗ್ಯ ಕ್ಷೇಮಾಭಿವೃದ್ಧಿ ಯೋಜನೆ ಪ್ರಾರಂಭಿಸಬೇಕು.
ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರತ ಪತ್ರಕರ್ತರ ಘಟಕ ಸ್ಥಾಪಿಸಬೇಕು.
ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ ನೀಡಬೇಕು.
ಪಿಯುಸಿ, ಪದವಿ ಓದುತ್ತಿರುವ ಪತ್ರಕರ್ತರ ಮಕ್ಕಳಿಗೆ ಲ್ಯಾಪ್‌ಟ್ಯಾಪ್ ನೀಡಬೇಕು.
ಪತ್ರಕರ್ತರು ಮೃತಪಟ್ಟರೆ ₹ 2 ಲಕ್ಷ ಸಹಾಯ ಧನ ನೀಡಬೇಕು.
ಟೋಲ್‌ನಲ್ಲಿ ಉಚಿತ ಪ್ರವೇಶ ಒದಗಿಸಬೇಕು.