ಚೆನ್ನೈ (PTI): '2024-25ರ ಮಧ್ಯಂತರ ಬಜೆಟ್‌ನಲ್ಲಿ ತಮಿಳುನಾಡಿಗೆ ಅಗತ್ಯ ಅನುದಾನ ಹಂಚಿಕೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರುವರಿ 8ರಂದು ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗುವುದು' ಎಂದು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶನಿವಾರ ತಿಳಿಸಿದೆ.

ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ, ಚಂಡಮಾರುತದಿಂದ ಆಗಿರುವ ಹಾನಿಯ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯಕ್ಕೆ ಅಗತ್ಯವಿರುವಷ್ಟು ಅನುದಾನ ನೀಡದೆ ತಾರತಮ್ಯ ಧೋರಣೆ ಅನುಸರಿಸುತ್ತಿರುವ ಕೇಂದ್ರದ ಧೋರಣೆ ಖಂಡನೀಯ. ಫೆ.8ರಂದು ರಾಷ್ಟ್ರ ರಾಜಧಾನಿಯಲ್ಲಿ ಹಮ್ಮಿಕೊಳ್ಳಲಾಗುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಸೇರಿದಂತೆ ಮೈತ್ರಿ ಪಕ್ಷಗಳಿಗೆ ಕೋರಲಾಗುವುದು ಎಂದು ಡಿಎಂಕೆ ಪಕ್ಷದ ಸಂಸದೀಯ ನಾಯಕ ಟಿ.ಆರ್. ಬಾಲು ತಿಳಿಸಿದರು.
'2023ರ ಡಿಸೆಂಬರ್‌ನಲ್ಲಿ ಸಂಭವಿಸಿದ ಚಂಡಮಾರುತ, ಭಾರಿ ಪ್ರಮಾಣದ ಮಳೆ ಮತ್ತು ಪ್ರವಾಹಗಳಿಂದ ಆದ ಹಾನಿ ಸರಿಪಡಿಸಲು ₹37,000 ಕೋಟಿ ನೆರವು ಕೇಳಲಾಗಿತ್ತು. ಆದರೆ, ಅದರ ಬಗ್ಗೆ ಘೋಷಣೆ ಇಲ್ಲ. ಅಲ್ಲದೆ, ಮದುರೈನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಣಕಾಸು ಹಂಚಿಕೆ ಮಾಡುವ ಬಗ್ಗೆ ಯಾವುದೇ ಘೋಷಣೆಗಳಿಲ್ಲ' ಎಂದು ಅವರು ಆರೋಪಿಸಿದರು.