ರಾಂಚಿ: ಬಡವರು, ದಲಿತರು, ಬುಡಕಟ್ಟು ಜನಾಂಗದವರನ್ನು ದಮನಿಸುವ ಜೀತ ಪದ್ಧತಿಯ ವಿರುದ್ಧ ಹೋರಾಡುವ ಸಮಯ ಬಂದಿದೆ ಎಂದು ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.
ರಾಂಚಿ: ಬಡವರು, ದಲಿತರು, ಬುಡಕಟ್ಟು ಜನಾಂಗದವರನ್ನು ದಮನಿಸುವ ಜೀತ ಪದ್ಧತಿಯ ವಿರುದ್ಧ ಹೋರಾಡುವ ಸಮಯ ಬಂದಿದೆ ಎಂದು ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.
ಸುಮಾರು ₹600 ಕೋಟಿ ಮೊತ್ತದ ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೂರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.
ಇ.ಡಿ ಬಂಧನಕ್ಕೂ ಮುನ್ನ ಸೊರೇನ್ ಅವರು ನೀಡಿದ ವಿಡಿಯೊ ಸಂದೇಶದಲ್ಲಿ, 'ಈ ಬೆದರಿಕೆಗೆಲ್ಲ ನಾನು ಹೆದರುವುದಿಲ್ಲ, ಅಂತಿಮವಾಗಿ ಸತ್ಯಕ್ಕೆ ಗೆಲುವು ಸಿಗಲಿದೆ' ಎಂದು ಹೇಳಿದ್ದಾರೆ.
'ಇ.ಡಿ ಅಧಿಕಾರಿಗಳು ನನ್ನನ್ನು ಬಂಧಿಸಲು ಬಂದಿದ್ದಾರೆ. ದಿನವಿಡೀ ಪ್ರಶ್ನೆ ಮಾಡಿದ ಬಳಿಕ ಯೋಜಿತ ರೀತಿಯಲ್ಲಿ ಬಂಧಿಸಿದ್ದಾರೆ. ನಾನು ಯಾವುದೇ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಇ.ಡಿ ಬಳಿ ಯಾವುದೇ ಪುರಾವೆಗಳಿಲ್ಲ. ಆದರೂ ದೆಹಲಿಯ ನನ್ನ ನಿವಾಸದ ಮೇಲೆ ದಾಳಿ ನಡೆಸುವ ಮೂಲಕ ನನ್ನ ಹೆಸರಿಗೆ ಕಳಂಕ ತಂದಿದ್ದಾರೆ' ಎಂದು ಹೇಳಿದ್ದಾರೆ.
ಈ ನಡುವೆ ಜಾರ್ಖಂಡ್‌ನಲ್ಲಿ ಆಡಳಿತಾರೂಢ ಮೈತ್ರಿಕೂಟದ ನೇತೃತ್ವ ವಹಿಸಿದ್ದ ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಶಾಸಕಾಂಗ ಪಕ್ಷದ ನಾಯಕನಾಗಿ ಹಿರಿಯ ನಾಯಕ ಚಂಪೈ ಸೊರೇನ್ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಸರ್ಕಾರ ರಚಿಸಲು ಹಕ್ಕು ಪ್ರತಿಪಾದಿಸಿದ್ದಾರೆ.