ನವದೆಹಲಿ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ (ಎಎಂಯು) ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.
ನವದೆಹಲಿ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ (ಎಎಂಯು) ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಏಳು ನ್ಯಾಯಮೂರ್ತಿಗಳ ಪೀಠವು ವಾದಿ-ಪ್ರತಿವಾದಿಗಳ (ಉಭಯ ಪಕ್ಷಗಳ?) ವಾದಗಳನ್ನು ಕಳೆದ ಎಂಟು ದಿನಗಳಿಂದ ಆಲಿಸಿದೆ.
ಎಎಂಯುಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತ ವಿಷಯವು ಕಳೆದ ಹಲವು ದಶಕಗಳಿಂದ ಕಾನೂನು ಜಟಿಲದಲ್ಲಿ ಸಿಲುಕಿಕೊಂಡಿದೆ.
ಈ ವಿಷಯವನ್ನು ಬಗೆಹರಿಸುವ ಸಲುವಾಗಿ ಪ್ರಕರಣದ ವಿಚಾರಣೆಯನ್ನು ಏಳು ನ್ಯಾಯಮೂರ್ತಿಗಳ ಪೀಠಕ್ಕೆ ವಹಿಸಬೇಕೆಂದು 2019ರ ಫ್ರಬ್ರುವರಿ 12ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.