ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಸರಗೋಡು ತಾಲೂಕಿನ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಅಣಂಗೂರು ಶ್ರೀ ಶಾರದಾಂಬ ಸಭಾಭವನದಲ್ಲಿ ನಿನ್ನೆ ನಡೆಯಿತು. ಶ್ರೀ ಶಾರದಾಂಬ ಸೇವಾ ಸಂಘದ ಅಧ್ಯಕ್ಷರಾದ ಕೆ. ಕಮಲಾಕ್ಷ ದೀಪ ಬೆಳಗಿಸಿ ಉದ್ಘಾಟಿಸಿದರು.
ದ.ಕ. ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಮಾತೃಶ್ರೀ ಹೇಮಾವತಿ ಅಮ್ಮನವರ ಪರಿಕಲ್ಪನೆಯ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಕೌಟುಂಬಿಕವಾಗಿ, ಸಾಮಾಜಿಕವಾಗಿ, ಭೌದ್ಧಿಕವಾಗಿ ಆರ್ಥಿಕವಾಗಿ ಬದಲಾವಣೆ ಹೊಂದಿರುವ ಬಗ್ಗೆ, ಈ ಕಾರ್ಯಕ್ರಮದ ಮೂಲಕ ಮಹಿಳೆಯರ ವಿವಿಧ ಪ್ರತಿಭೆಗಳಿಗೆ ವೇದಿಕೆ ಸಿಕ್ಕಿರುವ ಬಗ್ಗೆ ಮಾರ್ಗದರ್ಶನ ನೀಡಿದರು.
ಜಿಲ್ಲಾ ನ್ಯಾಯಾಲಯದ ನ್ಯಾಯವಾದಿ ಶ್ರುತಿ ಜಿ.ವಿ, ಬದಿಯಡ್ಕ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮುಗಂ, ಕಾಸರಗೋಡು ತಾಲೂಕು ಕೇಂದ್ರ ಒಕ್ಕೂಟಗಳ ಅಧ್ಯಕ್ಷ ಜ್ಞಾನೇಶ್ ಆಚಾರ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕೂಡ್ಲು ಒಕ್ಕೂಟದ ಅಧ್ಯಕ್ಷÀ ಪ್ರಮೀಳಾ ಕುಮಾರಿ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಈಗಾಗಲೇ ಉದ್ಘಾಟನೆಗೊಂಡ 11 ಜ್ಞಾನವಿಕಾಸ ಕೇಂದ್ರಗಳಿಗೆ ಮಾನ್ಯ ಜಿಲ್ಲಾ ನಿರ್ದೇಶಕರು ಸಾಂಕೇತಿಕವಾಗಿ ದಾಖಲಾತಿ ಹಸ್ತಾಂತರ ಮಾಡಿದರು. ಉದ್ಘಾಟನಾ ಕಾರ್ಯಕ್ರಮದ ನಂತರ ನಡೆದ ಮಹಿಳೆ ಮತ್ತು ಸಮಾಜ ಎಂಬ ಮಹಿಳಾ ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಲೇಖಕಿ ಸ್ನೇಹಲತಾ ದಿವಾಕರ್ ಭಾಗವಹಿಸಿ ಸಮಗ್ರ ಮಾಹಿತಿ ನೀಡಿದರು. ಜ್ಞಾನವಿಕಾಸ ಕೇಂದ್ರಗಳ ಸದಸ್ಯರಿಗೆ ರಂಗೋಲಿ ಸ್ಪರ್ಧೆ, ಪುಷ್ಪಗುಚ್ಛ ತಯಾರಿ ಸ್ಪರ್ಧೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಸ್ಪರ್ಧೆಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳಿಗೆ ಹೂವಿನ ಕುಂಡವನ್ನು ಸ್ಮರಣಿಕೆ ರೂಪದಲ್ಲಿ ನೀಡಲಾಯಿತು.
ಕಾರ್ಯಕ್ರಮದ ಯಶಸ್ವಿಗೆ ಮಧೂರು ಶೌರ್ಯ ವಿಪತ್ತು ಘಟಕದ ಸ್ವಯಂಸೇವಕರು ಹಾಗೂ ಕುತ್ಯಾಳ ಶ್ರೀ ನವಜೀವನ ಸಮಿತಿಯ ಸದಸ್ಯರು ಸಹಕರಿಸಿದರು.
ತಾಲೂಕು ಯೋಜನಾಧಿಕಾರಿ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ವಂದಿಸಿದರು. ಕಾಸರಗೋಡು ವಲಯ ಮೇಲ್ವಿಚಾರಕರು ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಿಕಾಸ ಕೇಂದ್ರಗಳ ನಿರ್ವಹಣಾ ಸೇವಾಪ್ರತಿನಿಧಿಗಳು ಹಾಗೂ ಕೇಂದ್ರಗಳ ಸದಸ್ಯರು ಭಾಗವಹಿಸಿದ್ದರು.