ನವದೆಹಲಿ (PTI): ಮಣಿಪುರದ ಜನರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು 'ಕೆಲವು ಮುಖ್ಯ ನಿರ್ಧಾರ'ಗಳನ್ನು ಕೈಗೊಳ್ಳಲಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಶನಿವಾರ ಹೇಳಿದ್ದಾರೆ.
ನವದೆಹಲಿ (PTI): ಮಣಿಪುರದ ಜನರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು 'ಕೆಲವು ಮುಖ್ಯ ನಿರ್ಧಾರ'ಗಳನ್ನು ಕೈಗೊಳ್ಳಲಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಶನಿವಾರ ಹೇಳಿದ್ದಾರೆ.
ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿ 'ಅತಿಮುಖ್ಯ ವಿಚಾರ'ಗಳನ್ನು ಚರ್ಚಿಸಿದ ಬಳಿಕ ಅವರು ಈ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಉನ್ನತ ಅವಕಾಶ ನನ್ನದಾಗಿತ್ತು. ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಅತಿಮುಖ್ಯ ವಿಚಾರಗಳ ಬಗ್ಗೆ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದೆ' ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಆದರೆ, ಚರ್ಚೆಯಾದ ವಿಷಯಗಳ ಬಗ್ಗೆ ಯಾವುದೇ ವಿವರವನ್ನು ಅವರು ಹಂಚಿಕೊಂಡಿಲ್ಲ.
ಮಣಿಪುರದಲ್ಲಿ ಮೇ 3, 2023ರಂದು ಆರಂಭವಾದ ಹಿಂಸಾಚಾರ ನಿರಂತರವಾಗಿ ಮುಂದುವರೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರವೇ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಪ್ರಕಟಿಸಲಿದೆ ಎನ್ನುವ ಸೂಚನೆಯನ್ನು ಅವರು ನೀಡಿದ್ದಾರೆ.