ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಳೆದ ಐದು ದಿವಸಗಳ ಕಾಲ ನಡೆದ ಜಾತ್ರಾ ಮಹೋತ್ಸವ ಶ್ರೀ ವಿಷ್ನುಮೂರ್ತಿ ದೈವದ ಒತ್ತೆಕೋಲ, ಧ್ವಜಾರೋಹಣದೊಂದಿಗೆ ಸೋಮವಾರ ಸಮಾರೋಪಗೊಂಡಿತು.
ದೇವಸ್ಥಾನ ಸನಿಹದ ಮೈದಾನದಲ್ಲಿ ನಡೆದ ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಮಹೋತ್ಸವದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಮ್ಯೂಸಿಕಲ್ ನೈಟ್, ನೃತ್ಯ ಸೇರಿದಂತೆ ಕಾರ್ಯಕ್ರಮ ವೈವಿಧ್ಯ ನಡೆಯಿತು. ಮಧ್ಯಾಹ್ನ ದೇಗುಲದಲ್ಲಿ ಧ್ವಜಾವರೋಹಣ, ಸಂಪ್ರೋಕ್ಷಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ(ಕೆಂಡಸೇವೆ)ನಡೆಯಿತು.