ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ಭಜನಾ ಸಂಘದ ಆಶ್ರಯದಲ್ಲಿ ಉದನೇಶ್ವರ ಕುಣಿತ ಭಜನೆ ಸಂಘವನ್ನು ಭಾನುವಾರ ಉದ್ಘಾಟಿಸಲಾಯಿತು. ಅರ್ಚಕ ಬಾಲಸುಬ್ರಹ್ಮಣ್ಯ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರು. ಮೊಕ್ತೇಸರ ಪಿ.ಜಿ.ಜಗನ್ನಾಥ ರೈ, ಸೀತಾರಾಮ ನವಕಾನ, ಸೇವಾ ಸಮಿತಿ ಪ್ರದಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಯುವ ಸಮಿತಿ ಅಧ್ಯಕ್ಷ ಡಾ.ಶ್ರೀಶಕುಮಾರ್ ಪಂಜಿತ್ತಡ್ಕ, ಕಾರ್ಯದರ್ಶಿ ಭಾಸ್ಕರ.ಪಿ., ಭಜನಾ ಸಂಘದ ಸದ್ಯಸರು, ಶಿವಶಕ್ತಿ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು. ಪ್ರಥಮ ಭಜನಾ ತರಗತಿಯು ನಡೆಯಿತು.