ದಾವಣಗೆರೆ( ಹರ್ಡೇಕರ್ ಮಂಜಪ್ಪ ಮುಖ್ಯ ವೇದಿಕೆ): ಗ್ರಾಮೀಣ ಮತ್ತು ಕಲ್ಯಾಣ ಕರ್ನಾಟಕದ ಪತ್ರಕರ್ತರಿಗೆ ಬಸ್ ಪಾಸ್ ಕೊಡಬೇಕು ಎಂಬುದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಆಗುತ್ತಿರುವ ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಗ್ರಾಮೀಣ ಬಸ್ ಪಾಸ್ ನೀಡುವಂತೆ ಮನವಿ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.