ಇಸ್ಲಾಮಾಬಾದ್ : ಪಾಕಿಸ್ತಾನದ ಬಲೂಚಿಸ್ತಾನದ ವಿವಿಧೆಡೆ ಗುರುವಾರ ಕನಿಷ್ಠ 10 ಬಾಂಬ್ ಸ್ಫೋಟ ಮತ್ತು ಗ್ರೆನೇಡ್ ದಾಳಿ ಘಟನೆ ನಡೆದಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಇಸ್ಲಾಮಾಬಾದ್ : ಪಾಕಿಸ್ತಾನದ ಬಲೂಚಿಸ್ತಾನದ ವಿವಿಧೆಡೆ ಗುರುವಾರ ಕನಿಷ್ಠ 10 ಬಾಂಬ್ ಸ್ಫೋಟ ಮತ್ತು ಗ್ರೆನೇಡ್ ದಾಳಿ ಘಟನೆ ನಡೆದಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
'ಪೊಲೀಸ್ ಠಾಣೆಗಳು ಮತ್ತು ಡೆಪ್ಯುಟಿ ಕಮಿಷನರ್ ಕಚೇರಿಯನ್ನು ಗುರಿಯಾಗಿಸಿಕೊಂಡು ಈ ದಾಳಿಗಳು ನಡೆದಿವೆ.
ಮುಂದಿನ ವಾರ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಕಾಪಾಡಲು ಪಾಕಿಸ್ತಾನದ ಭದ್ರತಾ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇದರ ಮಧ್ಯೆಯೇ ಈ ಘಟನೆ ನಡೆದಿರುವುದು ಆತಂಕ ಮೂಡಿಸಿದೆ.
24 ಉಗ್ರರ ಹತ್ಯೆ: ಬಲೂಚಿಸ್ತಾನ ಪ್ರಾಂತ್ಯದಲ್ಲಿ ಕಳೆದ ಮೂರು ದಿನಗಳಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 24 ಉಗ್ರರು ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನದ ಸೇನೆ ಶುಕ್ರವಾರ ಹೇಳಿದೆ. ಕಾರ್ಯಾಚರಣೆ ವೇಳೆ ಭದ್ರತಾ ಪಡೆಯ ಮೂವರು ಮತ್ತು ಇಬ್ಬರು ನಾಗರಿಕರೂ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.