HEALTH TIPS

ಪರಿಸರ ಸ್ನೇಹಿ ಎಲೆಕ್ಟ್ರಿಕ್‌ ವಾಹನಗಳಿಗೆ ಉತ್ತೇಜನ: ನಿರ್ಮಲಾ ಸೀತಾರಾಮನ್

Top Post Ad

Click to join Samarasasudhi Official Whatsapp Group

Qries

           ವದೆಹಲಿ: ಪರಿಸರ ಸ್ನೇಹಿ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್‌ ವಾಹನಗಳನ್ನು ಹಾಗೂ ಸಾರ್ವಜನಿಕ ಸಾರಿಗೆಯಲ್ಲಿ ಇ-ಬಸ್‌ಗಳನ್ನು ಮತ್ತಷ್ಟು ಪರಿಚಯಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

            ಇಂದು ( ಗುರುವಾರ) ಮಧ್ಯಂತರ ಬಜೆಟ್‌ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದರು.

ಸಾಂದ್ರೀಕೃತ ಜೈವಿಕ ಅನಿಲ(ಸಿಬಿಜಿ) ಮತ್ತು ಸಾಂದ್ರೀಕೃತ ನೈಸರ್ಗಿಕ ಅನಿಲದ( ಸಿಎನ್‌ಜಿ) ಮಿಶ್ರಣವನ್ನು ಸಾರಿಗೆ ಮತ್ತು ಕೊಳವೆಯ ನೈಸರ್ಗಿಕ ಅನಿಲ ಸರಬರಾಜಿನಲ್ಲಿ ಬಳಸುವುದು ಕಡ್ಡಾಯ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

             ಪರಿಸರ ಸ್ನೇಹಿ ಪರ್ಯಾಯ ವ್ಯವಸ್ಥೆ ಒದಗಿಸುವ ನಿಟ್ಟಿನಲ್ಲಿ 'ಜೈವಿಕ ಉತ್ಪಾದನೆ ಮತ್ತು ಜೈವಿಕ ಫೌಂಡ್ರಿ' ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

                ಇಂದಿನ ಭಾರತದ ಆರ್ಥಿಕತೆಯು ವ್ಯಾಪಾರ ಹಾಗೂ ಪ್ರವಾಸೋದ್ಯಮದ ಆಕರ್ಷಕ ತಾಣವಾಗಿದೆ. ಪ್ರವಾಸೋದ್ಯಮದಲ್ಲಿ ಅಪಾರ ಅವಕಾಶಗಳಿವೆ. ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಐಕಾನಿಕ್ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಲಿದೆ ಎಂದು ಭರವಸೆ ನೀಡಿದರು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries