ಗುವಾಹಟಿ: ಬಹುವಿವಾಹ ಪದ್ಧತಿಯನ್ನು ನಿಷೇಧಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಮುಂಬರುವ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಶುಕ್ರವಾರ ಹೇಳಿದ್ದಾರೆ.
ಗುವಾಹಟಿ: ಬಹುವಿವಾಹ ಪದ್ಧತಿಯನ್ನು ನಿಷೇಧಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಮುಂಬರುವ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಶುಕ್ರವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ವಿಭಾಗವು ಕರಡು ಮಸೂದೆಯ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.
'ಉತ್ತರಾಖಂಡ ಸರ್ಕಾರವು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲು ಮುಂದಾಗಿದೆ. ಈ ಕುರಿತು ಚರ್ಚಿಸಲು ಅಲ್ಲಿನ ಸರ್ಕಾರ ಫೆ.5ರಿಂದ ನಾಲ್ಕು ದಿನಗಳ ವಿಶೇಷ ಅಧಿವೇಶನ ಕರೆದಿದೆ. ಅಸ್ಸಾಂನಲ್ಲಿಯೂ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಚಿಂತನೆ ಇದೆ. ಈ ಸಂಬಂಧ, ಉತ್ತರಾಖಂಡ ಸರ್ಕಾರ ಕೈಗೊಳ್ಳುವ ಕ್ರಮವನ್ನು ಎದುರು ನೋಡುತ್ತಿದ್ದೇವೆ' ಎಂದು ಶರ್ಮ ಹೇಳಿದರು.
ಅಸ್ಸಾಂ ವಿಧಾನಸಭೆಯ ಬಜೆಟ್ ಅಧಿವೇಶನವು ಫೆ.5ರಿಂದ 28ರ ವರೆಗೆ ನಡೆಯಲಿದ್ದು, ಫೆ. 12ರಂದು ಬಜೆಟ್ ಮಂಡನೆ ಮಾಡಲಾಗುತ್ತಿದೆ.
ವಿಪಕ್ಷಗಳ ವಿರೋಧ: ಈ ಹಿಂದೆ, ಬಹುವಿವಾಹ ಪದ್ಧತಿ ನಿಷೇಧ ಕಾಯ್ದೆ ಜಾರಿಗೊಳಿಸುವುದಾಗಿ ಅಸ್ಸಾಂ ಸರ್ಕಾರ ಘೋಷಿಸಿದಾಗ, ವಿರೋಧ ಪಕ್ಷಗಳಿಂದ ಟೀಕೆ ವ್ಯಕ್ತವಾಗಿತ್ತು.
'ಈ ಕ್ರಮವು ಜನರ ಗಮನವನ್ನು ಬೇರೆ ಕಡೆ ಸೆಳೆಯುವ ತಂತ್ರ ಹಾಗೂ ಕೋಮುವಾದಿ' ಎಂದು ವಿಪಕ್ಷಗಳು ಟೀಕಿಸಿದ್ದವು.