ಕಾಸರಗೋಡು: ವಿಶ್ವ ಕ್ಯಾನ್ಸರ್ ವಿರೋಧಿ ದಿನಾಚರಣೆ ಜಿಲ್ಲಾ ವೈದ್ಯಕೀಯ ಕಛೇರಿ (ಆರೋಗ್ಯ) ಸಮ್ಮೇಳನ ಸಭಾಂಗಣದಲ್ಲಿ ಜರುಗಿತು. ಕಾಞಂಗಾಡು ನಗರಸಭಾ ಅಧ್ಯಕ್ಷೆ ಕೆ.ವಿ.ಸುಜಾತಾ ಸಮಾರಮಭ ಉದ್ಘಾಟಿಸಿದರು. ಕಾಞಂಗಾಡು ನಗರಸಭಾ ಸದಸ್ಯೆ ಕೆ.ವಿ ಮಾಯಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕಾಞಂಗಾಡು ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಎಂ.ಪಿ.ಜೀಜಾ ಸಂದೇಶ ನೀಡಿದರು.
ತಿರುವನಂತಪುರ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಂಕಾಲಜಿಸ್ಟ್ ಡಾ.ಕೆ.ಅತೀರಾ, ಸನಾತನ ಕಲಾ ಮತ್ತು ವಿಜ್ಞಾನ ಕಾಲೇಜಿನ ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಸಜಿನಾ ಟಿ.ಮೋಹನ್ ಮತ್ತು ಕಾಞಂಗಾಡ್ ಸರ್ಕಾರಿ ನಸಿರ್ಂಗ್ ಶಾಲೆಯ ಬೋಧಕ ಕೆ.ಎಂ.ಶರೀಫ್ ಉಪಸ್ಥಿತರಿದ್ದರು. ಜಿಲ್ಲಾ ಉಪ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಎನ್.ಪಿ.ಪ್ರಶಾಂತ್ ಸ್ವಾಗತಿಸಿದರು. ಎಸ್.ಸಯನಾ ವಂದಿಸಿದರು.ಕಾರ್ಯಕ್ರಮದ ಅಂಗವಾಗಿ ಕಾಞಂಗಾಡು ಹಳೆ ಬಸ್ ನಿಲ್ದಾಣದಲ್ಲಿ ಸನಾತನ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಆಯೋಜಿಸಿದ್ದ ಫ್ಲಾಶ್ ಮಾಬ್ ಗಮನ ಸೆಳೆಯಿತು.
ಈ ಸಂದರ್ಭ ಕಾಲೇಜು ಹಾಗೂ ನಸಿರ್ಂಗ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಾಗೃತಿ ವಿಚಾರ ಸಂಕಿರಣದಲ್ಲಿ ಕಾಞಂಗಾಡು ಜಿಲ್ಲಾ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ.ರಾಜು ಮ್ಯಾಥ್ಯೂ ಸಿರಿಯಾಕ್ ತರಗತಿ ನಡೆಸಿದರು. .ಜಿಲ್ಲಾ ವೈದ್ಯಕೀಯ ಕಛೇರಿ (ಆರೋಗ್ಯ), ರಾಷ್ಟ್ರೀಯ ಆರೋಗ್ಯ ಮಿಷನ್, ಸನಾತನ ಕಲಾ ಮತ್ತು ವಿಜ್ಞಾನ ಕಾಲೇಜು, ಕಾಂಞಂಗಾಡ್ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕ್ಯಾನ್ಸರ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ದಿನದ ಮುಖ್ಯ ಉದ್ದೇಶವಾಗಿದ್ದು, ಸಂದೇಶದ ಪೂರ್ವಭಾವಿಯಾಗಿ ಜಿಲ್ಲೆಯ ಎಲ್ಲ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ತಿಳಿಸಿದರು. ಎ.ವಿ.ರಾಮದಾಸ್ ಮಾಹಿತಿ ನೀಡಿದರು.