ತಿರುವನಂತಪುರ: ಮುಂಬರುವ ಲೋಕಸಭಾ ಚುನಾವಣೆಗೆ ಕೇರಳದ ವಯನಾಡು ಕ್ಷೇತ್ರದಿಂದ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಅವರ ಪತ್ನಿ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುವ ಸಾಧ್ಯತೆಯಿದೆ.
ವಯನಾಡಿನಿಂದ ಈ ಬಾರಿ ರಾಹುಲ್ ಗಾಂಧಿ ಸ್ಪರ್ಧೆಯನ್ನು ಸಿಪಿಎಂ ಮತ್ತು ಸಿಪಿಐ ವಿರೋಧಿಸಿದೆ. ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ತಮ್ಮ ಅಭ್ಯರ್ಥಿ ಕಣಕ್ಕಿಳಿಸಲು ಸಿಪಿಐ, ಸಿಪಿಎಂ ಮುಂದಡಿ ಇಟ್ಟಿವೆ ಎನ್ನಲಾಗಿದೆ.
ಸಿಪಿಐ, ಸಿಪಿಎಂ ಮತ್ತು ಕಾಂಗ್ರೆಸ್ ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದ ಮಿತ್ರ ಪಕ್ಷಗಳಾಗಿವೆ.