ರಾಂಚಿ: ಜಾರ್ಖಂಡ್‌ನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಎಂಎಂ ಪಕ್ಷದ ನಾಯಕ ಚಂಪೈ ಸೊರೇನ್ ಅವರು ಫೆಬ್ರುವರಿ 5 ರಂದು ಸದನದಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ಸಚಿವ ಅಲಾಮ್ಗಿರ್ ಅಲಾಮ್ ಶುಕ್ರವಾರ ಸಂಪುಟ ಸಭೆಯ ಬಳಿಕ ತಿಳಿಸಿದ್ದಾರೆ.

ಮುಖ್ಯಮಂತ್ರಿ ಚಂಪೈ ಸೊರೇನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇಂದು (ಶುಕ್ರವಾರ) ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಚಂಪೈ ಅವರಿಗೆ ಪ್ರಮಾಣವಚನ ಬೊಧಿಸಿದರು.
ಚಂಪೈ ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕರಾದ ಅಲಾಮ್ಗಿರ್ ಅಲಾಮ್ ಮತ್ತು ಆರ್‌ಜೆಡಿ ನಾಯಕ ಸತ್ಯಾನಂದ ಭೋಕ್ತಾ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.