ನವದೆಹಲಿ: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ₹1.18 ಲಕ್ಷ ಕೋಟಿಯ 2024-25ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಂಡಿಸಿದ್ದಾರೆ.
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ₹1.18 ಲಕ್ಷ ಕೋಟಿಯ 2024-25ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಂಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ₹ 20,760 ಕೊರತೆ ಬಜೆಟ್ ಮಂಡಿಸಿದ್ದರೂ, ರಾಜ್ಯದ ಜಿಡಿಪಿ ಶೇ 7.5ರ ದರದಲ್ಲಿ ಬೆಳವಣಿಗೆಯಾಗುವ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದ್ದಾರೆ.
ಆರ್ಥಿಕ ವರ್ಷದ ಬಂಡವಾಳ ವೆಚ್ಚ ₹38,566 ಕೋಟಿ ಎಂದು ಅಂದಾಜಿಸಿದ್ದು, ಇದು ಜಿಎಸ್‌ಡಿಪಿಯ ಶೇ 14.64ರಷ್ಟಿದೆ ಎಂದಿದ್ದಾರೆ. ತೆರಿಗೆ ಹಾಗೂ ಇನ್ನಿತರ ಮೂಲಗಳಿಂದ ಒಟ್ಟು ₹97,861 ಸಂಗ್ರಹವಾಗಲಿದೆ ಎಂದು ಅಂದಾಜಿಸಿದ್ದಾರೆ.
'ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಕೇಂದ್ರೀಕರಣದ ಆಡಳಿತ, ಅಂತರ್ಗತ ಅಭಿವೃದ್ಧಿ, ಆದಾಯ ಮೂಲಗಳ ಉತ್ತೇಜನಕ್ಕೆ 2019ರಲ್ಲಿ ಐತಿಹಾಸಿಕ ಕ್ರಮ ಕೈಗೊಳ್ಳಲಾಗಿದೆ. ಆ ಮೂಲಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ' ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
'ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯ ಜತೆಗೆ ಭದ್ರತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲೂ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಮತ್ತು ಶೂನ್ಯ ಸಹಿಷ್ಣುತೆ ಹೊಂದುವ ನೀತಿಯನ್ನು ಸರ್ಕಾರ ಅಳವಡಿಸಿಕೊಂಡಿದೆ. ಇದೆಲ್ಲದರ ಪರಿಣಾಮ ಕಣಿವೆ ರಾಜ್ಯದಲ್ಲಿ ಸುರಕ್ಷತೆ ಹಚ್ಚಿದೆ' ಎಂದು ತಮ್ಮ ಬಜೆಟ್ ಮಂಡನೆ ಸಂದರ್ಭದಲ್ಲಿ ಹೇಳಿದ್ದಾರೆ.