ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಹಣಕಾಸು ವರ್ಷದ ಕೇಂದ್ರ 'ಮಧ್ಯಂತರ ಬಜೆಟ್' ಅನ್ನು ಇಂದು (ಗುರುವಾರ, 1 ಫೆಬ್ರುವರಿ) ಮಂಡಿಸಿದರು.
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಹಣಕಾಸು ವರ್ಷದ ಕೇಂದ್ರ 'ಮಧ್ಯಂತರ ಬಜೆಟ್' ಅನ್ನು ಇಂದು (ಗುರುವಾರ, 1 ಫೆಬ್ರುವರಿ) ಮಂಡಿಸಿದರು.
ಬಜೆಟ್ ಭಾಷಣವನ್ನು ಅವರು, 59 ನಿಮಿಷ 15 ಸೆಕೆಂಡ್‌ಗಳಲ್ಲೇ ಮುಗಿಸಿದರು.
2019-2020ರಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದ ಸೀತಾರಾಮನ್, 2 ಗಂಟೆ 17 ನಿಮಿಷ ಮಾತನಾಡಿದ್ದರು.
'ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ'
ದೇಶದ ಆರ್ಥಿಕ ಸ್ಥಿತಿಗತಿ ಕುರಿತು ಸರ್ಕಾರವು ಸಂಸತ್ತಿನಲ್ಲಿ ಶ್ವೇತಪತ್ರ ಹೊರಡಿಸಲಿದೆ ಎಂದು ನಿರ್ಮಲಾ ಅವರು ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.
ದೇಶದ ಆರ್ಥಿಕತೆಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕಳೆದ 10 ವರ್ಷಗಳಲ್ಲಿ ಧನಾತ್ಮಕ ಬದಲಾವಣೆಯನ್ನು ಕಂಡಿದೆ ಎಂದು ಪ್ರತಿಪಾದಿಸಿದ್ದಾರೆ.
ದೇಶದ ಜನರ ಆದಾಯವು ಶೇ 50ರಷ್ಟು ಏರಿಕೆಯಾಗಿದೆ ಎಂದಿರುವ ಅವರು, ತೆರಿಗೆ ಪಾವತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿಯೂ ಘೋಷಿಸಿದ್ದಾರೆ.