ಕಾಸರಗೋಡು: ನಗರದ ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕಥಾ ಬಿಂದು ಸಾಹಿತ್ಯ ಸಾಂಸ್ಕøತಿಕ ವೇದಿಕೆ ಸಹಕಾರದೊಂದಿಗೆ 'ಕೇರಳ-ಕರ್ನಾಟಕ ಸಂಸ್ಕøತಿ ಉತ್ಸವ-2024'ಕಾರ್ಯಕ್ರಮ ಮಾ. 10ರಂದು ಬೆಳಗ್ಗೆ 10ಕ್ಕೆ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗಮಂಟಪದಲ್ಲಿ ಜರುಗಲಿದೆ.
ಕರ್ನಾಟಕ ವಿಧಾನಪರಿಷತ್ ಉಪಸಭಾ ಪತಿ ಎಂ.ಕೆ ಪ್ರಾಣೇಶ್ ಸಮಾರಂಭ ಉದ್ಘಾಟಿಸುವರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಜಾನಪದ ಪರಿಷತ ಕೇರಳ ಘಟಕ ಅದ್ಯಕ್ಷ ಎ.ಆರ್ ಸುಬ್ಬಯ್ಯಕಟ್ಟೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಸಾಹಿತಿ ಡಾ. ಕೊಳ್ಚಪ್ಪೆ ಗೋವಿಂದ ಭಟ್, ಕಸಾಪ ಕೇರಳ ಗಡಿನಾಡ ಘಟಕ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯುವುದು. ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವುದು.. ಈ ಸಂದರ್ಭ ಧರ್ಮದರ್ಶಿ ಹರಿಕ್ರಷ್ಣ ಪುನರೂರು ಅವರಿಗೆ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆನಪಿನ ರಾಷ್ಟ್ರೀಯ ಪ್ರಶಸ್ತಿ, ಕವಿ, ಸಾಹಿತಿ ಸತ್ಯವತಿ ಕೊಳ್ಚಪ್ಪೆ ಅವರಿಗೆ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ನೆನಪಿನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕೃತಿ ಬಿಡುಗಡೆ, ಕನ್ನಡ ಭವನ ಅಭಿನಂದನಾ ಪ್ರಶಸ್ತಿ ಪ್ರದಾನ, ಕನ್ನಡ ಪಯಸ್ವಿನಿ ಪ್ರಶಸ್ತಿ-2024, ಕನ್ನಡ ಭವನದ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವುದು.