ಮುಂಬೈ: ನಗರದ ಹುಕ್ಕಾ ಪಾರ್ಲರ್ ಮೇಲೆ ನಡೆದ ದಾಳಿಯಲ್ಲಿ ಹಾಸ್ಯ ಕಲಾವಿದ ಹಾಗೂ ಬಿಗ್ ಬಾಸ್ ವಿಜೇತ ಮುನಾವರ್ ಫಾರೂಕಿ ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ: ನಗರದ ಹುಕ್ಕಾ ಪಾರ್ಲರ್ ಮೇಲೆ ನಡೆದ ದಾಳಿಯಲ್ಲಿ ಹಾಸ್ಯ ಕಲಾವಿದ ಹಾಗೂ ಬಿಗ್ ಬಾಸ್ ವಿಜೇತ ಮುನಾವರ್ ಫಾರೂಕಿ ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫಾರೂಕಿ ಸೇರಿದಂತೆ ಬಂಧಿತರ ವಿರುದ್ಧ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಸೂದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜತೆಗೆ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
32 ವರ್ಷದ ಫಾರೂಕಿ ಅವರು ಯೂಟ್ಯೂಬ್‌ನಲ್ಲಿ ಹಾಸ್ಯ ಕಲಾವಿದರಾಗಿ, ರ್‍ಯಾಪರ್ ಆಗಿ ಜನಪ್ರಿಯರಾಗಿದ್ದಾರೆ. 2021ರಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಫಾರೂಕಿ ಅವರು 35 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.