ನವದೆಹಲಿ: ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಕೈಬಿಟ್ಟ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರೆ ಚುನಾವಣಾ ಆಯುಕ್ತರ ಕಾಯ್ದೆ, 2023ರ ಮಾನ್ಯತೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 15ಕ್ಕೆ ನಿಗದಿ ಮಾಡಿದೆ.

2023ರ ಡಿಸೆಂಬರ್‌ನಲ್ಲಿ ಜಾರಿಗೆ ಬಂದ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಾತಿಯ ಹೊಸ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಈ ವರ್ಷದ ಆರಂಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಎರಡು ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿದೆ.
ಈ ಕಾನೂನು ಪ್ರಧಾನಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಕೈಬಿಟ್ಟು ಸಚಿವರ ನೇಮಕ ಮಾಡಲು ಅವಕಾಶ ನೀಡಿದೆ. ಇದು ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿಗೆ ವಿರುದ್ಧವಾಗಿದೆ.
ಮಾರ್ಚ್ 9ರಂದು ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ಬಳಿಕ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತ್ರ ಆಯೋಗದ ಸಮಿತಿಯಲ್ಲಿರುವ ಈ ಸಂದರ್ಭದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯು ಚುನಾವಣಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಾಳೆ ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ.