ನವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ(ಇ.ಡಿ) ಕಸ್ಟಡಿ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್ 1 ರವರೆಗೆ ವಿಸ್ತರಿಸಿದೆ.

ಪ್ರಸ್ತುತ ಕಸ್ಟಡಿ ಅವಧಿ ಇಂದು (ಗುರುವಾರ) ಮುಗಿದ ಹಿನ್ನೆಲೆ ಇ.ಡಿ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಿತ್ತು. ಅಲ್ಲದೇ 7 ದಿನಗಳ ಹೆಚ್ಚಿನ ಕಸ್ಟಡಿಗೆ ಮನವಿ ಮಾಡಿತ್ತು.