ಮುಳ್ಳೇರಿಯ: ಅಡೂರು ಮಹಾಲಿಂಗೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ಸೋಮವಾರ ರಾತ್ರಿ ಡಾ,ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕøತಿಕ ಸಂಘದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮದಲ್ಲಿ ಬಹುಮುಖ ಪ್ರತಿಭೆ ವರ್ಷಾ ಶೆಟ್ಟಿ ಬಂಬ್ರಾಣ ಅವರಿಗೆ ಕಲಾ ಚೈತನ್ಯ -2024 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ವಾಣಿಶ್ರೀ ಕಾಸರಗೋಡು, ಗುರುರಾಜ್ ಕಾಸರಗೋಡು, ವಿದುಷಿ ರೇಖಾ ದಿನೇಶ್ ಮಂಜೇಶ್ವರ, ಸಾಹಿತಿ ವಿರಾಜ್ ಅಡೂರು, ರಾಮ ನಾಯ್ಕ ಸಹಿತ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.