ನವದೆಹಲಿ: ದೆಹಲಿಯ ಶಾಸ್ತ್ರಿ ಪಾರ್ಕ್‌ನಲ್ಲಿ 22 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ದೆಹಲಿಯ ಶಾಸ್ತ್ರಿ ಪಾರ್ಕ್‌ನಲ್ಲಿ 22 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಮೃತ ಯುವಕನನ್ನು ಮುಸ್ತಾಕಿಮ್ ಎಂದು ಗುರುತಿಸಲಾಗಿದೆ. ಅವರು ಚಾಂದಿನಿ ಚೌಕ್‌ನಲ್ಲಿ ಸೇಲ್ಸ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಎದೆಗೆ ಗುಂಡು ಹಾರಿಸಲಾಗಿದೆ. ಆತನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ' ಎಂದು ದೆಹಲಿ ಈಶಾನ್ಯ ಡಿಸಿಪಿ ಜಾಯ್ ಟಿರ್ಕಿ 'ಪಿಟಿಐ'ಗೆ ತಿಳಿಸಿದ್ದಾರೆ.