ನವದೆಹಲಿ: ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23ಕ್ಕೂ ಹೆಚ್ಚು ಜನರನ್ನು ವಂಚಿಸಿರುವ ಆರೋಪದ ಮೇಲೆ ಮುಂಬೈನಲ್ಲಿ ನಿಯೋಜನೆಗೊಂಡಿರುವ ಕೇಂದ್ರ ರೈಲ್ವೆಯ ಮುಖ್ಯ ಡಿಪೋ ಮೆಟೀರಿಯಲ್ ಸೂಪರಿಟೆಂಡೆಂಟ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ರಾಜೇಶ್ ರಮೇಶ್ ನಾಯಕ್ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ ಎಂದು ಅವರು ಹೇಳಿದ್ದಾರೆ.
ಆರೋಪಿ ನಾಯಕ್ ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರು ಸಹೋದರರಿಂದ ಸುಮಾರು ₹10 ಲಕ್ಷ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಂತ್ರಸ್ತರ ತಂದೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ದೂರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶೋಧದ ವೇಳೆ, ಸಿಬಿಐ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ 23ಕ್ಕೂ ಹೆಚ್ಚು ಜನರು ನಾಯಕ್ ಅವರ ವಂಚನೆಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.