ಕಾಸರಗೋಡು: ಲೋಕಸಭಾ ಚುನಾವಣೆಗೆ ದಿನ ನಿಗದಿಯಾಗಿದ್ದು, ಕೇರಳದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ 20ಲೋಕಸಭಾ ಕ್ಷೇತ್ರಗಳಿಗೆ ಏ. 26ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇದರಲ್ಲಿ ಎರಡನೇ ಹಂತದಲ್ಲಿ ಕೇರಳದಲ್ಲಿ ಚುನಾವಣೆ ನಡೆಯಲಿದೆ.
ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಸೇರಿದಂತೆ ಐಎನ್‍ಡಿಐಎ ಒಕ್ಕೂಟ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದರೆ, ಕೇರಳದಲ್ಲಿ ಕಾಂಗ್ರೆಸ್ ಮತ್ತು ಸಿಪಿಎಂ ಎದುರಾಲಿಗಳಾಗಿರುವುದು ವಿಶೇಷವಾಗಿದೆ. ಕೇರಳದಲ್ಲಿ ಎನ್‍ಡಿಎ ಪ್ರಬಲ ಪೈಪೋಟಿಗೆ ಮುಂದಾಗಿದೆ. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ 20ಕ್ಷೇತ್ರಗಳಲ್ಲಿ 19ರಲ್ಲಿ ಐಕ್ಯರಂಗ ಹಾಗೂ ಒಮದು ಕ್ಷೇತ್ರದಲ್ಲಿ ಎಡರಂಗ ಗೆಲುವು ಸಾಧಿಸಿತ್ತು. ಆಲಪ್ಪುಳ ಕ್ಷೇತ್ರದಲ್ಲಿ ಮಾತ್ರ ಎಡರಂಗ ಗೆಲುವು ಸಾಧಿಸಿತ್ತು.
ಚುನಾವಣೆ ದಿನಾಂಕ ಘೊಷಣೆಯಾಗುತ್ತಿದ್ದಂತೆ ದೇಶಾದ್ಯಂತ ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿದೆ. ಕಾಸರಗೋಡು ಜಿಲ್ಲೆಯಲ್ಲಿ ಚುನಾವಣಾ ನೀತಿಸಂಹಿತೆ ಸಮರ್ಪಕವಾಗಿ ಜಾರಿಯಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ ಆರಂಭಿಸಲಾಯಿತು. ಕಾಸರಗೊಡು ಜಿಲ್ಲಾಧಿಕಾರಿ ಕಚೇರಿ ವಠಾರದಲ್ಲಿ ನಡೆದ ಸಮಾರಭದಲ್ಲಿ ಜಿಲ್ಲಾಧಿಕಾರಿ ಕೆ. ಇನ್‍ಬಾಶೇಖರ್ ಪ್ಲೈಯಿಂಗ್ ಸ್ಕ್ಯಾಡ್ ಗೆ ಧ್ವಜತೋರಿಸುವ ಮೂಲಕ ಚಾಲನೆ ನೀಡಿದರು. ಅಪರ ಜಿಲ್ಲಾಧಿಕಾರಿ ಸೂಫಿಯಾನ್ ಅಹಮ್ಮದ್ ಹಾಗೂ ಇತರ ಅದಿಕಾರಿಗಳು ಉಪಸ್ಥಿತರಿದ್ದರು.
ಫ್ಲೈಯಿಂಗ್ ಸ್ಕ್ಯಾಡ್ ಕಾರ್ಯಾಚರಣೆಗೆ ಜಿಲ್ಲಾಧಿಕಾರಿ ಕೆ. ಇನ್‍ಬಾಶೇಖರ್ ಧ್ವಜತೋರಿಸಿ ಚಾಲನೆ ನೀಡಿದರು.