ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ 2 ರೂಪಾಯಿ ಕಡಿತಗೊಳಿಸಿದೆ.
ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸಿದೆ. ಈ ಪರಿಷ್ಕೃತ ದರ ನಾಳೆ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ.
ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಬೆಲೆಗಳಲ್ಲಿ ಇತ್ತೀಚಿಗೆ ಕಡಿತ ಮಾಡಲಾಗಿತ್ತು. ಇನ್ನು ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿತ್ತು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲದ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಬೆಲೆ ಇಳಿಕೆಯು, ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್‌ಪಿಜಿ) ಅಡುಗೆ ಇಂಧನವಾಗಿ ಬಳಸುವ ಸುಮಾರು 33 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ.