ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳೂ ಸೇರಿದಂತೆ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಯುಜಿಸಿ ನಡೆಸುವ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶಾತಿ ಪರೀಕ್ಷೆ (ಸಿಯುಇಟಿ)ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಯುಜಿಸಿ ಅಧ್ಯಕ್ಷ ಜಗದೇಶ್ ಕುಮಾರ್ ಅವರು ಮಂಗಳವಾರ ತಿಳಿಸಿದ್ದಾರೆ.
ಈ ಹಿಂದೆ ಅರ್ಜಿ ಸಲ್ಲಿಸುವ ಕೊನೆಯ ದಿನ ಮಂಗಳವಾರ ರಾತ್ರಿ 11 ಗಂಟೆಯವರೆಗೆ ಮಾತ್ರ ಇತ್ತು ಸಿಯುಇಟಿ- ಯುಜಿ ಆನ್‌ಲೈನ್ ಅರ್ಜಿ ಸಲ್ಲಿಸುವ ದಿನಾಂಕವನ್ನು 2024ರ ಮಾರ್ಚ್ 31ರ ರಾತ್ರಿ 9.50ರವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳ ಮತ್ತು ಪಾಲಕರ ಕೋರಿಗೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.
ದೇಶದಾದ್ಯಂತ ಕೇಂದ್ರ, ರಾಜ್ಯ, ಡೀಮ್ಡ್ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪ್ರಕ್ರಿಯೆಗಳನ್ನು ಸುಗಮಗೊಳಿಸಲು 2022 ರಲ್ಲಿ ಈ ಪರೀಕ್ಷೆ ಪರಿಚಯಿಸಲಾಯಿತು.