HEALTH TIPS

ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿ ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ

             ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ.

           ಪ್ರಧಾನಿ ಮೋದಿ ಅವರು ಗುರುವಾರ ಶ್ರೀನಗರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

             ಅಧಿಕೃತ ಪ್ರಕಟಣೆಯ ಪ್ರಕಾರ, ಮೋದಿ ಅವರು ನಾಳೆ ಶ್ರೀನಗರದ ಬಕ್ಷಿ  ಕ್ರೀಡಾಂಗಣದಲ್ಲಿ "ವಿಕ್ಷಿತ್ ಭಾರತ್ ವಿಕ್ಷಿತ್ ಜಮ್ಮು ಕಾಶ್ಮೀರ" ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೃಷಿ-ಆರ್ಥಿಕತೆಯನ್ನು ಉತ್ತೇಜಿಸಲು ಸುಮಾರು 5,000 ಕೋಟಿ ರೂಪಾಯಿಗಳ ಉಪಕ್ರಮಗಳನ್ನು ಉದ್ಘಾಟಿಸಲಿದ್ದಾರೆ.

            ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿರೋಧ ಪಕ್ಷಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆಗೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಪ್ರಧಾನಿ ಮೋದಿಯವರ ಕಾಶ್ಮೀರ ಭೇಟಿ ರಾಜಕೀಯ ವಲಯದಲ್ಲಿ ಹೆಚ್ಚು ಮಹತ್ವ ಪಡೆದುಕೊಂಡಿದೆ.

          ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 5, 2019 ರಂದು ಆರ್ಟಿಕಲ್ 370 ಅನ್ನು ರದ್ದುಗೊಳಿಸಿತು ಮತ್ತು ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries