ನವದೆಹಲಿ: ದೆಹಲಿ ಜಲ ಮಂಡಳಿಯ ನೀರು ಶುದ್ದೀಕರಣ ಘಟಕದಲ್ಲಿರುವ 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ವ್ಯಕ್ತಿಯ ಮೃತದೇಹವನ್ನು ಸುಮಾರು 12 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆಯ ಬಳಿಕ ಹೊರ ತೆಗೆಯಲಾಗಿದೆ ಎಂದು ಸಚಿವೆ ಅತಿಶಿ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, 'ಕೊಳವೆ ಬಾವಿಗೆ ಬಿದ್ದಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಹೇಳಲು ತುಂಬಾ ದುಃಖವಾಗುತ್ತಿದೆ.
ಮೃತಪಟ್ಟ ವ್ಯಕ್ತಿ ಸುಮಾರು 30 ವರ್ಷದ ವಯಸ್ಸಿನವನಾಗಿದ್ದು, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ ಕೊಳವೆ ಬಾವಿಯಿರುವ ಕೋಣೆಗೆ ಯಾಕೆ ಬಂದನು, ಅಲ್ಲಿ ಹೇಗೆ ಬಿದ್ದನು ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.
ಶನಿವಾರ ತಡರಾತ್ರಿ ಸುಮಾರು 1 ಗಂಟೆಯ ವೇಳೆ ವ್ಯಕ್ತಿ ಕೊಳವೆ ಬಾವಿಗೆ ಬಿದ್ದಿರುವ ಮಾಹಿತಿ ಲಭಿಸಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಎನ್‌ಡಿಆರ್‌ಎಫ್ ಮತ್ತು ಡಿಎಫ್‌ಎಸ್ ತಂಡ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತ್ತು.